

ಬೆಂಗಳೂರು: ಹಾರೋಹಳ್ಳಿ ತಾಲ್ಲೂಕಿನ ಮರಳವಾಡಿ ವಲಯದ ದುರ್ಗೇಗೌಡನ ದೊಡ್ಡಿ ಗ್ರಾಮದ ತ್ರಿಲೋಕ ಧರ್ಮ ಸಂರಕ್ಷಣಾ ಟ್ರಸ್ಟ್‌ನ ಪರಿಹಾರ ಕ್ಷೇತ್ರದ ಆವರಣದಲ್ಲಿ ಬುಧವಾರ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ನಡೆಸಲಾಯಿತು.
ಈ ವೇಳೆ ಕೆಎಂಎ್ ಹಾಲು ಒಕ್ಕೂಟದ ನಿರ್ದೇಶಕ ಮತ್ತು ರಾಮನಗರ ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಎಚ್.ಎಸ್. ಹರೀಶ್ ಕುಮಾರ್ ಗಿಡಗಳಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಎಂ.ಬಿ. ಚೆಲುವರಾಜ್, ತ್ರಿಲೋಕ ಧರ್ಮ ಸಂರಕ್ಷಣಾ ಟ್ರಸ್ಟ್‌ನ ಟ್ರಸ್ಟಿ ಅಮೂಲ್ಯ, ತಾಲೂಕು ಯೋಜನಾಧಿಕಾರಿ ನಾಗವೇಣಿ, ಕಿದ್ವಾಯಿ ಆಸ್ಪತ್ರೆಯ ಆಪ್ತ ಸಮಾಲೋಚಕಿ ಯಶೋಧಾ, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರಾದ ಮಹಾದೇವಯ್ಯ, ಕೃಷ್ಣಪ್ಪ, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ರೈತರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ 850 ರೈತರಿಗೆ ಸಸಿಗಳನ್ನು ವಿತರಿಸಲಾಯಿತು. ಬೀಜದುಂಡೆಗಳನ್ನು ಎಸೆಯುವ ಮೂಲಕ ಲಕ್ಷಾಂತರ ಗಿಡಗಳನ್ನು ನೆಡುವ ಕಾರ್ಯಕ್ರಮ, ಪರಿಸರ ಸಂರಕ್ಷಣೆ ಹಾಗೂ ಅರಣ್ಯೀಕರಣದ ಮೂಲಕ ವನ್ಯಜೀವಿಗಳನ್ನು ಹಾಗೂ ಅವುಗಳ ವಾಸ ಸ್ಥಾನವನ್ನು ಉಳಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.