ಬಸವೇಶ್ವರ ಸ್ವಾಮಿ ರಥೋತ್ಸವ ಅದ್ದೂರಿ

HRP Ratha
ಅಣಜಿಗೆರೆ ಗ್ರಾಮದಲ್ಲಿ ಗುರುವಾರ ಬಸವೇಶ್ವರ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ಜರುಗಿತು.
Published on

ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಹೋಬಳಿಯ ಅಣಜಿಗೆರೆ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿ ರಥೋತ್ಸವ ಗುರುವಾರ ತಡರಾತ್ರಿ ಅದ್ದೂರಿಯಾಗಿ ಜರುಗಿತು.

ಬೆಳಗ್ಗೆಯಿಂದಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಹಣ್ಣು, ಕಾಯಿ, ಹೋಳಿಗೆಯ ನೈವೇದ್ಯ ಸಮರ್ಪಿಸಿದರು. ಸಂಜೆ ವೇಳೆಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ನಂತರ ನಂದಿಕೋಲು, ಹಲಗೆ, ಸಮಾಳ ಹಾಗೂ ಮೇಳ ವಾದ್ಯದ ಮೂಲಕ ಬಸವೇಶ್ವರಗೆ ಜೈಕಾರ ಕೂಗುತ್ತಾ ರಥ ಎಳೆಯಲಾಯಿತು. ತೇರಿಗೆ ಬಾಳೆಹಣ್ಣು ತೂರುವ ಮೂಲಕ ಭಕ್ತಿ ಸಮರ್ಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net