ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ

220922 Harapanahalli Job Fair Press meet
Published on

ಹರಪನಹಳ್ಳಿ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಸೆ.24ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಒಬಿಸಿ ಘಟಕದ ಉಪಾಧ್ಯಕ್ಷ ಶಂಕರನಹಳ್ಳಿ ಡಾ.ಉಮೇಶ್ ಬಾಬು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದರು. ಶಂಕರನಹಳ್ಳಿ ಡಾ.ಭೀಮಪ್ಪ ಚಾರಿಟಬಲ್ ಟ್ರಸ್ಟ್, ಅಕ್ಷರ ಫೌಂಡೇಷನ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಕಾರದೊಂದಿಗೆ ಕಾಂಗ್ರೆಸ್ ನೇತೃತ್ವದಲ್ಲಿ ಅಂದು 9ರಿಂದ ಸಂಜೆ 6 ವರೆಗೆ ಶಿಬಿರ ನಡೆಯಲಿದೆ. ತಾಲೂಕಿನಲ್ಲಿ ಸಾಕಷ್ಟು ನಿರುದ್ಯೋಗ ಸಮಸ್ಯೆ ಇದೆ. ಬಹುತೇಕ ಹಳ್ಳಿಗಳಲ್ಲಿನ ಯುವಕರು ವಿದ್ಯಾಭ್ಯಾಸ ಮುಗಿಸಿ, ಮನೆಯಲ್ಲಿ ಖಾಲಿ ಕುಳಿತಿದ್ದಾರೆ. ಇದನ್ನು ಮನಗಂಡು ತಾಲೂಕಿನ ನೀರುದ್ಯೋಗ ಯುವಕ-ಯುವತಿಯರಿಗೆ ಉದ್ಯೋಗ ಒದಗಿಸಲು ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಮುಖರು ಪಾಲ್ಗೊಳ್ಳುವರು ಎಂದರು. ಅಕ್ಷರ ಪೌಂಡೇಶನ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಮುಖರಾದ ಕುಮಾರ್ ಉಪ್ಪಾರ್ ಮಾತನಾಡಿ, ಈ ಉದ್ಯೋಗ ಮೇಳದಲ್ಲಿ 95ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿವೆ. ಮೇಳಕ್ಕೆ ಬರುವವರು ಅಂಕಪಟ್ಟಿ, ಆಧಾರ್‌ಕಾರ್ಡ್ ಮತ್ತಿತರ ದಾಖಲೆಗಳನ್ನು ತರಬೇಕು. 18 ರಿಂದ 33 ವರ್ಷದೊಳಗಿನ ನಿರುದ್ಯೋಗಿಗಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗೆ ರಮೇಶ್(7619197742), ಮಂಜು( 8722021267), ಶಶಿ (9900239953) ಅವರನ್ನು ಸಂಪರ್ಕಿಸಬಹುದು ಎಂದರು.

ಕೆಪಿಸಿಸಿ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ತಿಮ್ಮಪ್ಪ, ಗ್ರಾಪಂ ಸದಸ್ಯ ಪ್ರಸನ್ನ ಪೂಜಾರ್, ಅಲಮರಸೀಕೆರೆ ರಮೇಶ, ಮಂಜುನಾಥ, ರಾಹುಲ್‌ರೆಡ್ಡಿ, ಶಶಿನಾಯ್ಕ, ಕೃಷ್ಣಪ್ಪ, ಶಿವಕುಮಾರ್, ರಾಜು ಶಂಕರನಹಳ್ಳಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net