

ಹರಪನಹಳ್ಳಿ: ರಾಷ್ಟ್ರೀಯ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಸಾರಥ್ಯದಲ್ಲಿ ಕೈಗೊಂಡಿರುವ ಭಾರತ್ ಐಕ್ಯತಾ ಯಾತ್ರೆ ಅಭಿಯಾನ ಯಶಸ್ವಿಯಾಗಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ ಎಂದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮಾತನಾಡಿದರು. ಈ ಯಾತ್ರೆ 3570 ಕಿ.ಮೀ ವರೆಗೂ ನಡೆಯಲಿದ್ದು, ಪಾದಯಾತ್ರೆ ಉದ್ದಕ್ಕೂ ರಾಹುಲ್ ಗಾಂಧಿಯವರು ಅಲ್ಲಿನ ಜನರ ಸ್ಥಿತಿ-ಗತಿ ಅವರ ಜೀವನ ಶೈಲಿಯನ್ನು ಆಲಿಸಲಿದ್ದಾರೆ ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಎಂ.ವಿ.ಅಂಜಿನಪ್ಪ ಮಾತನಾಡಿ, ಬ್ರಿಟಿಷರನ್ನು ದೇಶದಿಂದ ಹೊಡೆದೋಡಿಸಿದ ರೀತಿಯಲ್ಲೇ ಬಿಜೆಪಿಯನ್ನು ಅಧಿಕಾರದಿಂದ ಓಡಿಸಬೇಕು ಎಂದರು. ಇದೇ ವೇಳೆ ಕಾರ್ಯಕರ್ತರು ಮೇಣದ ಬತ್ತಿ ಬೆಳಗಿಸಿ ಭಾರತ್ ಜೋಡೋ ಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದರು.
ಪುರಸಭೆ ಸದಸ್ಯರಾದ ವೆಂಕಟೇಶ್ ವಕೀಲ, ಚಿಕ್ಕೇರಿ ಬಸಪ್ಪ, ಮುಖಂಡರಾದ ಹುಲಿಕಟ್ಟಿ ಚಂದ್ರಪ್ಪ, ಉದಯ್‌ಶಂಕರ್, ಮತ್ತೂರು ಬಸವರಾಜ, ಸಾಸ್ವಿಹಳ್ಳಿ ನಾಗರಾಜ, ಬಾಲಾಜಿ ಶಿವರಾಜ್, ರಮೇಶ್, ನರೇಶ್, ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಶೇಖರ್, ಸಹನಾ, ವನಜಾಕ್ಷಮ್ಮ, ರತ್ನಮ್ಮ, ರೇಣುಕಮ್ಮ, ಹಾಲಮ್ಮ ಇತರರಿದ್ದರು.