ಆರಂಭದಿಂದಲೇ ಕಲಿಕಾಸಕ್ತಿ ಮೂಡಿಸಿ

HRP-02
ಹರಪನಹಳ್ಳಿಯ ಮೇಗಳಪೇಟೆ ಸ.ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಲಾಯಿತು. ಬಿಇಒ ಎಚ್.ಪಾಲಾಕ್ಷಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಹೊನ್ನತ್ತೆಪ್ಪ, ಅಕ್ಷರ ದಾಸೋಹ ಯೋಜನೆ ಎಡಿ ನಾಗರಾಜ, ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಎಚ್.ಎಂ.ಮಲ್ಲಿಕಾರ್ಜುನಸ್ವಾಮಿ, ಮುಖಂಡ ಸಿ.ಎಂ.ಕೊಟ್ರಯ್ಯ, ಮುಖ್ಯಶಿಕ್ಷಕ ಪಾಂಡಪ್ಪ ಬಡಿಗೇರ ಇತರರಿದ್ದರು.
Published on

ಹರಪನಹಳ್ಳಿ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪ್ರಗತಿಗೆ ಒತ್ತು ನೀಡಬೇಕೆಂದು ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಎಚ್.ಎಂ.ಮಲ್ಲಿಕಾರ್ಜುನ ಸ್ವಾಮಿ ಹೇಳಿದರು.

ಪಟ್ಟಣದ ಮೇಗಳಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಗುಲಾಬಿ ಮತ್ತು ಸಿಹಿ ನೀಡಿ ಸ್ವಾಗತಿಸಿ ಶುಕ್ರವಾರ ಮಾತನಾಡಿದರು. ಮಕ್ಕಳ ಮನಸ್ಥಿತಿ ಪಾಲಕರಿಗಿಂತ ಶಿಕ್ಷಕರಿಗೆ ಹೆಚ್ಚು ತಿಳಿದಿರುತ್ತದೆ. ಮಕ್ಕಳಿಗೆ ಆರಂಭದಿಂದಲೇ ಕಲಿಕೆಯಲ್ಲಿ ಆಸಕ್ತಿ ಮೂಡಿಸಬೇಕು. ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳವಾಗಲು ಶಿಕ್ಷಕರು ಶ್ರಮ ವಹಿಸಬೇಕು ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಸರ್ಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಎಲ್ಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಶಾಲಾರಂಭದ ಮೊದಲ ದಿನ ಮಕ್ಕಳಿಗೆ ಪಾಯಸ ನೀಡಿ, ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಸಿಆರ್‌ಪಿ ಎಚ್.ಸಲೀಂ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಕೊಟ್ರೇಶ, ಮತ್ತೂರು ಬಸವರಾಜ, ಶಿಕ್ಷಕರಾದ ಎಂ.ರತ್ನಮ್ಮ, ಪುಣ್ಯವತಿ, ಶಿವಯೋಗಿ, ಮಂಜಪ್ಪ ಬಣಕಾರ, ಚಿದಾನಂದಪ್ಪ, ಎಂ ಕೊಟ್ರಮ್ಮ, ಎಸ್.ಕೊಟ್ರಮ್ಮ, ಭಾರತಿ, ಸವಿತಾ, ಪಾಲಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net