

ಹರಪನಹಳ್ಳಿ: ದೇಶ ಹಾಗೂ ರಾಜ್ಯದಲ್ಲಿ ಶಾಂತಿ ಕದಡುವಂತಹ ಯಾವುದೇ ಸಂಘಟನೆ ಇದ್ದರೂ ಅದನ್ನು ನಿಷೇಧಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ ಸಾಹೇಬ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದರು. ಬಜರಂಗದಳವಾದರೂ ಸರಿ, ಮುಸ್ಲಿಂ ಸಂಘಟನೆಗಳಾದರೂ ಸರಿ, ಇಲ್ಲವೇ ಇನ್ಯಾವುದೇ ಸಂಘಟನೆಯಾದರೂ ಇರಲಿ, ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡುತ್ತಿದ್ದರೆ ಅಂತಹ ಸಂಘಟನೆಗಳನ್ನು ನಿಷೇಧಿಸಿದರೆ ತಪ್ಪೇನಿಲ್ಲ ಎಂದರು.
ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಅನ್ಯಪಕ್ಷದ ವ್ಯಕ್ತಿಯನ್ನು ಬೆಂಬಲಿಸುವ ಕೈ ಕಾರ್ಯಕರ್ತರ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದರು.