ಪ್ರಾದೇಶಿಕ ಪಕ್ಷಗಳಿಂದ ಅಭಿವೃದ್ಧಿ, ಜೆಡಿಎಸ್ ಕಾರ್ಯಾಧ್ಯಕ್ಷ ನಬೀಸಾಹೇಬ್ ಅಭಿಮತ

JDS
ಹರಪನಹಳ್ಳಿಯಲ್ಲಿ ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷರಾಗಿ ಪರಮೇಶ್ವರಪ್ಪ ಅವರಿಗೆ ಜಿಲ್ಲಾಧ್ಯಕ್ಷ ಕೊಟ್ರೇಶಪ್ಪ ನೇಮಕಾತಿ ಆದೇಶ ಪ್ರತಿ ನೀಡಿದರು.
Published on

ಹರಪನಹಳ್ಳಿ: ರಾಷ್ಟ್ರೀಯ ಪಕ್ಷಗಳು ಜನರಿಗೆ ಸ್ಪಂದಿಸುತ್ತಿಲ್ಲ. ಹಾಗಾಗಿ ಪ್ರಾದೇಶಿಕ ಪಕ್ಷಕ್ಕೆ ಪ್ರಜೆಗಳು ಬೆಂಬಲಿಸಬೇಕೆಂದು ಎಂದು ಮಾಜಿ ಸಚಿವ, ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಎನ್.ಎಂ.ನಬೀಸಾಹೇಬ್ ಹೇಳಿದರು. ಪಟ್ಟಣದ ತಳಪಾರಿಯಲ್ಲಿ ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು.

ಈಗಾಗಲೇ ರಾಷ್ಟ್ರೀಯ ಪಕ್ಷಗಳನ್ನು ಬಹಳಷ್ಟು ರಾಜ್ಯಗಳಲ್ಲಿ ಜನತೆ ತಿರಸ್ಕಾರ ಮಾಡಿದ್ದಾರೆ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಪಂಚರತ್ನ ಯೋಜನೆಗಳ ಅನುಷ್ಠಾನಕ್ಕಾಗಿ ಕುಮಾರಸ್ವಾಮಿ ಅವರ ಕೈ ಬಲಪಡಿಸಲು ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸಲು ಮನವಿ ಮಾಡಿದರು.

ನಿಯೋಜಿತ ಅಭ್ಯರ್ಥಿ ನೂರು ಅಹ್ಮದ್ ಮಾತನಾಡಿ, ಕ್ಷೇತ್ರವೂ ಅಭಿವೃದ್ದಿಯಲ್ಲಿ ಹಿಂದುಳಿದಿದೆ. ರಾಷ್ಟ್ರೀಯ ಪಕ್ಷಗಳು ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಮೂಲ ಸೌಕರ್ಯಗಳಿಲ್ಲದೆ ಕ್ಷೇತ್ರ ಮೂಲೆ ಗುಂಪಾಗಿದೆ ಎಂದು ಟೀಕಿಸಿದರು. ತಾಲೂಕು ಜೆಡಿಎಸ್ ಅಧ್ಯಕ್ಷ ಶಿರಹಟ್ಟಿ ದಂಡೆಪ್ಪ, ಜೆಡಿಎಸ್ ನೂತನ ಕಾರ್ಯಾಧ್ಯಕ್ಷ ಪರಮೇಶ್ವರಪ್ಪ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net