

ಹರಪನಹಳ್ಳಿ: ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಕಡಿತ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಎಸ್‌ಎಫ್‌ಐ ಪದಾಧಿಕಾರಿಗಳು ಪಟ್ಟಣದ ತಹಸಿಲ್ ಉಪ ತಹಶೀಲ್ದಾರ್ ನಟರಾಜ್ ಅವರಿಗೆ ಮನವಿ ಸಲ್ಲಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಈ ಹಿಂದೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಆದರೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಅದನ್ನು ಸ್ಥಗಿತಗೊಳಿಸಲು ಆದೇಶ ನೀಡಲಾಗಿದೆ ಎಂದು ಎಸ್‌ಎಫ್‌ಐ ತಾಲೂಕು ಸಂಚಾಲಕ ಸಂಜು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಕಾಲೇಜುಗಳಲ್ಲಿ ದಾಖಲಾಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ಶುಲ್ಕ ಮರುಪಾವತಿ ಆದೇಶ ಮಾಡಲಾಗಿದೆ. ಆದರೆ ಖಾಸಗಿ ಕಾಲೇಜಿಗಳಿಗೆ ಆದೇಶವನ್ನು ಏಕೆ ಹೊರಡಿಸಿಲ್ಲ. ಸರ್ಕಾರದ ದಂದ್ವ ನಿಲುವು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತರ ರಕ್ಷಣೆಗೆ ಬದ್ಧವಿದೆ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿಎಚ್.ಡಿ ಸಂಶೋಧನ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳ ಶಿಷ್ಯ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳಿಂದ ವ್ಯಾಸಂಗಕ್ಕೆ ತೊಡಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.