ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನಹರಿಸಲಿ

Harapanahalli Awerness
ಹರಪನಹಳ್ಳಿಯಲ್ಲಿ ವ್ಯಸನಮುಕ್ತ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ ನಡೆಯಿತು. ತಹಸೀಲ್ದಾರ್ ಬಿ.ವಿ.ಗಿರಿಶ್ ಬಾಬು, ಟಿಎಚ್‌ಒ ಹಾಲಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ರಾಜಪ್ಪ ಬಾಗಳಿ, ಯಾಸಿನ್ ಹಾಗೂ ಪಟ್ಟಣದ ವಿವಿಧ ಶಾಲಾ ಮಕ್ಕಳು, ಶಿಕ್ಷಕರು ಭಾಗವಹಿಸಿದ್ದರು.
Published on

ಹರಪನಹಳ್ಳಿ: ಯುವ ಪೀಳಿಗೆ ದುಶ್ಚಟಗಳಿಗೆ ದಾಸರಾಗುವುದರಿಂದ ಭವಿಷ್ಯದಲ್ಲಿ ಸಮಸ್ಯೆಯಾಗಲಿದೆ ಎಂದು ತಹಸೀಲ್ದಾರ್ ಬಿ.ವಿ. ಗಿರೀಶ್ ಬಾಬು ಹೇಳಿದರು.

ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ನಿಮಿತ್ತ ಪಟ್ಟಣದ ಐಬಿ ವೃತ್ತದಲ್ಲಿ ತಾಲೂಕು ಆಡಳಿತದಿಂದ ಗುರುವಾರ ವ್ಯಸನಮುಕ್ತ ದಿನಾಚರಣೆಯ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಶಾಲಾ-ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳು ಕೆಟ್ಟ ಚಟಗಳಿಗೆ ದಾಸರಾಗದೆ ವಿದ್ಯಾಭ್ಯಾಸದತ್ತ ಗಮನಹರಿಸಬೇಕು. ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಷಣ್ಮುಖಪ್ಪ ಮಾತನಾಡಿ. ವಿದ್ಯಾರ್ಥಿಗಳು ಕೇವಲ ಕಲಿಕೆಗೆ ಸೀಮಿತವಾಗಿರದೆ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.

ಮನೆಯಲ್ಲಿ ಯಾರಾದರೂ ಕುಡಿತ ಅಥವಾ ಧೂಮಪಾನ ಸೇವನೆ ಮಾಡುವವರಿದ್ದರೆ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಮನಪರಿವರ್ತನೆ ಮಾಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net