ವಾರಸುದಾರರಿಗೆ ಮೊಬೈಲ್ ಹಸ್ತಾಂತರ

Harapanahalli Mobile Return
ಹರಪನಹಳ್ಳಿಯ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಗೆ ಮೊಬೈಲ್‌ಗಳನ್ನು ಹಸ್ತಾಂತರ ಮಾಡಲಾಯಿತು. ಡಿವೈಎಸ್ಪಿ ವೆಂಕಟಪ್ಪ ನಾಯಕ, ಸಿಪಿಐ ನಾಗರಾಜ ಕಮ್ಮಾರ, ಪಿಎಸ್‌ಐ ಶಂಭುಲಿಂಗ ಹಿರೇಮಠ ಇತರರಿದ್ದರು.
Published on

ಹರಪನಹಳ್ಳಿ: ಕಳ್ಳತನವಾಗಿದ್ದ ಮೊಬೈಲ್‌ಗಳನ್ನು ಸೋಮವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಗೆ ಡಿವೈಎಸ್ಪಿ ವೆಂಕಟಪ್ಪ ನಾಯಕ ಹಸ್ತಾಂತರಿಸಿದರು.

ಸಂತೆ ಮಾರುಕಟ್ಟೆ, ಬಸ್ ನಿಲ್ದಾಣ ಸೇರಿದಂತೆ ಇತರ ಕಡೆ ಮೊಬೈಲ್‌ಗಳನ್ನು ಕಳೆದುಕೊಂಡವರು ಸಿಇಐಆರ್ ಅಡಿ ಪ್ರಕರಣ ದಾಖಲಿಸಿದ್ದರು. ಕಳೆದು ಹೋದ ಫೋನ್‌ಗಳನ್ನು ಸಿಇಐಆರ್ ತಂತ್ರಜ್ಞಾನದಡಿ ಪೊಲೀಸರು ಪತ್ತೆಹಚ್ಚಿ 10 ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಪೋಲಿಸ್ ಇಲಾಖೆಯಿಂದ 2023ನೇ ಸಾಲಿನಲ್ಲಿ 154 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು 34 ಮೊಬೈಲ್‌ಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ನೀಡಲಾಗಿದೆ. ಸಿಪಿಐ ನಾಗರಾಜ ಕಮ್ಮಾರ, ಪಿಎಸ್‌ಐ ಶಂಭುಲಿಂಗ ಹಿರೇಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net