

ಮಡಿಕೇರಿ:
ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಕೆ.ಎ. ಹಾರಿಸ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ೨ ವ?ರ್ಗಳ ಹಿಂದೆ ಶಾಲೆಯ ಪೋ?ಕರು ಸರ್ವಾನುಮತದಿಂದ ಅವಿರೋಧವಾಗಿ ಸಮಿತಿಗೆ ಆಯ್ಕೆ ಮಾಡಲಾಗಿತ್ತು. ನನ್ನ ಅವಧಿಯಲ್ಲಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲಿ ಶ್ರಮಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ. ಕಳೆದ ಹತ್ತು ವ?ರ್ಗಳಿಂದ ಮಾಹಿತಿ ಹಕ್ಕು ಕಾರ್ಯಕರ್ತನಾಗಿ ಪ್ರಾಮಾಣಿಕ ಹೋರಾಟ ಮಾಡುತ್ತಾ ಬಂದಿದ್ದೇನೆ. ಇತ್ತೀಚೆಗೆ ನನ್ನ ಬೆಳವಣಿಗೆ ಸಹಿಸದ ಕೆಲವರು ಭ್ರ?್ಟರೊಂದಿಗೆ ಶಾಮೀಲಾಗಿ ನನ್ನ ಹೋರಾಟವನ್ನು ಹತ್ತಿಕುವ ದುರುದ್ದೇಶದಿಂದ ಕ್ಷುಲ್ಲಕ ವಿಚಾರಕ್ಕೆ, ಪದೇ ಪದೇ ಶಾಲೆಯ ಹೆಸರು ಎಳೆದು ತರುತ್ತಿರುವುದು ನನಗೆ ಬೇಸರ ತಂದಿದೆ. ನಾನು ನಡೆಸುವ ಪ್ರಾಮಾಣಿಕ ಹೋರಾಟವನ್ನು ಮತ್ತು ನನ್ನನ್ನು ಕುಗ್ಗಿಸಲು ಪ್ರಯತ್ನಿಸಿದರೆ ಅದು ಸಾಧ್ಯವಿಲ್ಲ. ನನ್ನ ಹೋರಾಟ ಭ್ರ?್ಟರ ವಿರುದ್ಧ ನಿರಂತರವಾಗಿರಲಿದೆ. ಆದ್ದರಿಂದ ಶಾಲೆಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.