ಬಾಲ ಕಾರ್ಮಿಕರನ್ನು ದುಡಿಸಿಕೊಂಡರೆ ಕಠಿಣ ಕ್ರಮ

IMG_20240813_122545
filter: 0; fileterIntensity: 0.0; filterMask: 0; module: photo; hw-remosaic: false; touch: (-1.0, -1.0); sceneMode: 2; cct_value: 0; AI_Scene: (-1, -1); aec_lux: 185.87088; aec_lux_index: 0; albedo: ; confidence: ; motionLevel: -1; weatherinfo: null; temperature: 41;
Published on


ಆಲೂರು : ಯಾವುದೇ ಖಾಸಗಿ ಅಂಗಡಿ, ಸಂಘ-ಸಂಸ್ಥೆ ಮಾಲೀಕರು ಬಾಲ ಕಾರ್ಮಿಕರನ್ನು ದುಡಿಯಲು ಕೆಲಸಕ್ಕೆ ಸೇರಿಸಿಕೊಂಡರೆ ಅಂತಹ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ದಾರ್ ಸಿ.ಪಿ.ನಂದಕುಮಾರ್ ಎಚ್ಚರಿಸಿದರು.


ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮಂಗಳವಾರ ಪಟ್ಟಣದಲ್ಲಿ ನಡೆಸಿದ ತಪಾಸಣೆಯ ಸಂದರ್ಭದಲ್ಲಿ ಅವರು ಮಾತನಾಡಿದರು.


ತಾಲೂಕಿನಲ್ಲಿ ಎಲ್ಲೂ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಪ್ರಕರಣಗಳು ನಡೆದಿಲ್ಲ. ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. 14 ವರ್ಷದೊಳಗಿನ ವಯಸ್ಸಿನ ಮಕ್ಕಳನು ದುಡಿಸಿದರೆ ಅಂತಹ ಮಾಲೀಕರ ವಿರುದ್ಧ 10 ಸಾವಿರ ರೂ. 20 ಸಾವಿರ ರೂ. ವರೆಗೆ ದಂಡ ಮತ್ತು 3 ತಿಂಗಳಿನಿಂದ 1 ವರ್ಷದವೆರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಸಿದರು.


ಹಿರಿಯ ಕಾರ್ಮಿಕ ನಿರೀಕ್ಷಕ ಪರಶುರಾಮ್ ಮಾತನಾಡಿ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಾಲಕಾರ್ಮಿಕರನ್ನು ನೇಮಿಸಿಕೊಂಡಂತಹ ಮಾಲೀಕರು ಪ್ರತಿ ಬಾಲ ಕಾರ್ಮಿಕರಿಗೆ 20 ಸಾವಿರ ರೂ. ಪರಿಹಾರವನ್ನು ಠೇವಣಿ ಇಡಲು ಬಾದ್ಯಸ್ಥರಾಗುತ್ತಾರೆ. ಆದ್ದರಿಂದ ಪ್ರತಿಯೊಬ್ಬ ಅಂಗಡಿ ಮಾಲೀಕರು ಬಾಲ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳದಂತೆ ತಿಳಿಸಿದರು.


ಇದೇ ಸಂದರ್ಭದಲ್ಲಿ ಆಲೂರು ಪಟ್ಟಣದ ಮುಖ್ಯ ಬೀದಿಗಳಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್, ಹೋಟೆಲ್‌ಗಳು, ಅಂಗಡಿಗಳು, ವರ್ಕ್ ಶಾಪ್‌ಗಳಿಗೆ ಭೇಟಿ ನೀಡಿ ಮಾಲೀಕರುಗಳಿಗೆ 14 ವರ್ಷದೊಳಗಿನ ಮಕ್ಕಳನ್ನು ಕಡ್ಡಾಯವಾಗಿ ಕೆಲಸಕ್ಕೆ ಸೇರಿಸಿಕೊಳ್ಳಕೂಡದು ಎಂದು ಅರಿವು ಮೂಡಿಸಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟೀಫನ್ ಪ್ರಕಾಶ್, ಶಿಕ್ಷಣ ಸಂಯೋಜಕ ರವಿಕಿರಣ್, ಹಿರಿಯ ಕಾರ್ಮಿಕ ನಿರೀಕ್ಷಕ ಪರಶುರಾಮ್, ಸಿಬ್ಬಂದಿ ಕನಕಲಕ್ಷ್ಮೀ, ಚಿದಾನಂದ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net