

ಬೆಳಗಾವಿ: ನಗರದಲ್ಲಿ ಕರ್ಕಶ ಶಬ್ದಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯುವ ಮೂಲಕ ನಗರ ಪೊಲೀಸರು ದ್ವಿಚಕ್ರವಾಹನ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಸಂಚಾರ ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿೆಕ್ಟಿವ್ ಸೈಲನ್ಸರ್ ಪೈಪ್ ಅಳವಡಿಸಿದ್ದ ವಿವಿಧ ಕಂಪನಿಗಳ ಬೈಕ್‌ಗಳ ವಿರುದ್ಧ ಸಿಪಿಐ ವಿನಾಯಕ ಬಡಿಗೇರ ನೇತೃತ್ವದಲ್ಲಿ ಸೋಮವಾರ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಒಟ್ಟು 16 ಬೈಕ್ ವಶಪಡಿಸಿಕೊಂಡು ಕಾನೂನು ಕ್ರಮ ಜರುಗಿಸಿದ್ದಾರೆ.