ಹಾಸನ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ|Hasan Greenfield Airport

h (2)
Published on

ನವದೆಹಲಿ: ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು(RamMohan Naidu)  ಅವರ ಜತೆ ಮಹತ್ವದ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿ ಶುಕ್ರವಾರ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ(H.D.Kumarswamy) ಅವರು, ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು.

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ಸೀಪ್ಲೇನ್ (ಸಮುದ್ರ ವಿಮಾನ ಸೇವೆ) ಆರಂಭಿಸುವ ಬಗ್ಗೆ ವಿಮಾನಯಾನ ಸಚಿವರ ಜತೆ ಚರ್ಚೆ ನಡೆಸಿದರು.

ಸಮುದ್ರವಿಮಾನ ಸೇವೆ ಕರ್ನಾಟಕಕ್ಕೆ ಬಹಳ ಮುಖ್ಯವಾದದ್ದು. ಪ್ರವಾಸೋದ್ಯಮಕ್ಕೆ ಇದು ಹೆಚ್ಚು ಬಳ ತುಂಬಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟ ಕುಮಾರಸ್ವಾಮಿ, ಮೈಸೂರು, ಮಂಡ್ಯ, ಬೈಂದೂರು, ಆಲಮಟ್ಟಿ, ಬೇಲೂರು-ಹಳೆಬೀಡು ಮತ್ತು ವಿಜಯನಗರ (ಹಂಪಿ) ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಸಮುದ್ರ ವಿಮಾನ ಸೇವೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆ ಸಲ್ಲಿಸಿದರು. ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಸ್ಥಳಗಳು ತ್ವರಿತ ಮತ್ತು ಸುಲಭ ಪ್ರಯಾಣದ ಆಯ್ಕೆಯಿಂದ ಹೆಚ್ಚಿನ ಲಾಭವನ್ನು ಪಡೆಯಬಹುದಾಗಿದೆ ಎಂದು ರಾಮಮೋಹನ್ ನಾಯ್ಡು ಅವರಿಗೆ ಮನವರಿಕೆ ಮಾಡಿಕೊಟ್ಟರು.

ಹಾಸನ ವಿಮಾನ ನಿಲ್ದಾಣ

ಹಾಸನ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣದ ನಿರ್ಮಾಣವನ್ನು ತ್ವರಿತಗತಿಯಲ್ಲಿ ಮುಗಿಸುವ(Hasan Greenfield Airport work should be completed as soon as possible) ಬಗ್ಗೆ ವಿಮಾನಯಾನ ಸಚಿವರಲ್ಲಿ ಕುಮಾರಸ್ವಾಮಿ ಮನವಿ ಮಾಡಿದರು.

ಹಾಸನ ವಿಮಾನ ನಿಲ್ದಾಣದ ನಿರ್ಮಾಣ ಪೂರ್ಣವಾದರೆ ಪ್ರವಾಸೋದ್ಯಮಕ್ಕೆ ಅನುಕೂಲ ಆಗುವುದರ ಜತೆಗೆ ಕೃಷಿ, ಕೈಗಾರಿಕೆ, ಹೈನುಗಾರಿಕೆ ಸೇರಿದಂತೆ ಅನೇಕ ವಲಯಗಳ ಅಭಿವೃದ್ಧಿಗೆ ವೇಗ ದೊರೆಯಲಿದೆ. ಹಾಸನ ಶೈಕ್ಷಣಿಕ, ಕೃಷಿ ಮತ್ತು ಕೈಗಾರಿಕಾ ಕೇಂದ್ರವಾಗಿದ್ದು, ರಾಷ್ಟ್ರೀಯ ಪ್ರವಾಸಿ ಜಾಲದ ಅತಿ ಪ್ರಮುಖ ಕೊಂಡಿಯಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧಿಕಾರಾವಧಿಯಲ್ಲಿ ಪ್ರಾರಂಭವಾದ ವಿಮಾನ ನಿಲ್ದಾಣ ಯೋಜನೆ ವ್ಯೆಹಾತ್ಮಕವಾಗಿ ಬಹಳ ಮಹತ್ವದ್ದಾಗಿದೆ ಎಂದು ಕುಮಾರಸ್ವಾಮಿ ಹೇಳಿದರು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಕೋಲಾರ ಸಂಸದ ಮಲ್ಲೇಶ್ ್ ಬಾಬು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net