ನ.29ರಂದು ಹಸನಬ್ಬ ಚಾರ್ಮಾಡಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

mng--26 Nov Hasanabba
Published on

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.29ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸಮಾಜ ಸೇವಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ
ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.


ವಿ ಫೋರ್ ನ್ಯೂಸ್ ನ ವ್ಯವಸ್ಥಾಪಕ ಲಕ್ಷ್ಮಣ ಕುಂದರ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net