ಸಭೆ ನಡೆಸಿದ ಭಾಸ್ಕರ್ ರಾವ್!

bhaskar rao
Published on

ಮೈಸೂರು: ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಭಾಸ್ಕರ್ ರಾವ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು, ಬುಧವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಬ್ರಾಹ್ಮಣ ಸಮುದಾಯದ ಮುಖಂಡರ ಸಭೆ ನಡೆಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಒಲವು ಹೊಂದಿರುವ ಭಾಸ್ಕರ್ ರಾವ್ ಪದೇ ಪದೇ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಸಮುದಾಯದ ಮುಖಂಡರೊಂಡಿಗೆ ಚರ್ಚೆ ನಡೆಸುತ್ತಿದ್ದಾರೆ. ಬುಧವಾರವೂ ಮೈಸೂರಿಗೆ ಭೇಟಿ ನೀಡಿದ ಅವರು ಸಮುದಾಯದ ಮುಖಂಡರ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net