

ಹಾಸನ (ಆಲೂರು): ತಾಲೂಕಿನ ಪಾಳ್ಯ ಹೋಬಳಿ ಬೆಟ್ಟಹಳ್ಳಿ ಗ್ರಾಮದಲ್ಲಿ ಅಳವಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಬ್ಯಾನರ್‌ಗೆ ಕಿಡಿಗೇಡಿಗಳು ಭಾವಚಿತ್ರಕ್ಕೆ ಮಂಗಳವಾರ ರಾತ್ರಿ ಬೆಂಕಿ ಹಚ್ಚಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿಗೆ ಅಭಿನಂದನೆ ಸಲ್ಲಿಸಿ ಬ್ಯಾನರ್ ಹಾಕಲಾಗಿತ್ತು. ಗ್ರಾಮದ ಹಿರಿಯರು ಹಾಗೂ ಪೊಲೀಸರ ಸಮ್ಮುಖದಲ್ಲಿ ಅಳವಡಿಸಿದ್ದ ಬ್ಯಾನರ್ ಸುಟ್ಟಿರುವುದಕ್ಕೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸ್ಥಳದಲ್ಲಿ ಪೊಲೀಸ್ ಭದ್ರತೆ ಹಾಕಲಾಗಿದ್ದು ಯಾವುದೇ ಅನಾಹುತ ಘಟಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಕಿಡಿಗೇಡಿಗಳನ್ನು ಬಂಧಿಸದಿದ್ದರೆ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.
ಆಲೂರು ಠಾಣೆ ಇನ್ಸಪೆಕ್ಟರ್ ವೆಂಕಟೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.