ಸೋಂಕು ನಿಯಂತ್ರಣಕ್ಕೆ ಸೂಚನೆ ಪಾಲಿಸಿ

10 CRP 02 (1)
Published on

ಚನ್ನರಾಯಪಟ್ಟಣ: ಕರೊನಾ ಸೋಂಕು ತೊಲಗಿಸಲು ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಅಂತರ ಪಾಲನೆ ಹಾಗೂ ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇದರಿಂದ ಸೋಂಕು ನಿಯಂತ್ರಣ ಸಾಧ್ಯ ಎಂದರು.
ಕಳೆದ ಎರಡು ದಿನಗಳಿಂದ ತಾಲೂಕು ಪ್ರವಾಸ ಕೈಗೊಂಡಿದ್ದು, ಸಮಸ್ಯೆಗಳ ಬಗ್ಗೆ ಗಮನಹರಿಸಿದ್ದೇನೆ. ಹಲವರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ.ಸುರೇಶ್, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಶಿವನಂಜೇಗೌಡ ಮಾತನಾಡಿದರು.
ತಾಲೂಕು ಅಧ್ಯಕ್ಷ ಚನ್ನಕೇಶವ, ಮಾಜಿ ಅಧ್ಯಕ್ಷರಾದ ಪಟೇಲ್ ಮಂಜುನಾಥ್, ನಾಗರಾಜ್, ಮುಖಂಡರಾದ ಅಣತಿ ಆನಂದ್, ಶ್ರೀಕಂಠಪ್ಪ, ನಂಜುಂಡ ಮೈಮ್, ಕಬ್ಬಳಿ ಸತೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net