

ಹಾಸನ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದ ಹೊಳೆನರಸೀಪುರದಲ್ಲಿ ಗುರುವಾರ ನಡೆದಿದೆ.
ಸುಪ್ರಿತ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಹೊಳೆನರಸೀಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವೀತೀಯ ವರ್ಷದ ಬಿಕಾಂ ಪದವಿ ಅಧ್ಯಯನ ಮಾಡುತ್ತಿದ್ದಳು. ಹಾಸ್ಟೆಲ್ನ ಸ್ನಾನದ ಗೃಹದಲ್ಲಿ ನೇಣಿಗೆ ಶರಣಾಗಿದ್ದಾಳೆ.
ಡೆತ್ನೋಟ್ ಸಹ ಪತ್ತೆಯಾಗಿದ್ದು, ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾಳೆ. ಘಟನಾ ಸ್ಥಳಕ್ಕೆ ಹೊಳೆನರಸೀಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್) ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ