ಕೂಲಿ ಕೆಲಸಕ್ಕೆ ಹೊರಟಿದ್ದ ಮಹಿಳೆ ಅಪಘಾತದಲ್ಲಿ ಸಾವು

WhatsApp Image 2020-11-17 at 10.11.22 AM
Published on

ಹಾಸನ: ಕೂಲಿ ಕೆಲಸಕ್ಕೆಂದು ರಸ್ತೆ ಬಳಿ ನಡೆದು ಹೋಗುತ್ತಿದ್ದ ಮಹಿಳೆಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಅರಕಲಗೂಡು ತಾಲೂಕು ರಾಮನಾಥಪುರದಲ್ಲಿ ಬೆಳಗ್ಗೆ 9ರ ಸಮಯದಲ್ಲಿ ಘಟನೆ ನಡೆದಿದ್ದು, ನಿವಾಸಿ ಲಕ್ಷ್ಮಮ್ಮ (38) ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಲಕ್ಷ್ಮಿದೇವಿ ಎಂಬುವರ ಜತೆಗೆ ಲಕ್ಷ್ಮಮ್ಮ ಎಂದಿನಂತೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ರಾಮನಾಥಪುರದ ಐಬಿ ವೃತ್ತದ ಬಳಿ ಹೋಗುತ್ತಿದ್ದಾಗ ಮೈಸೂರು ಕಡೆಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ.

ತೀವ್ರ ಗಾಯಗೊಂಡಿದ್ದ ಮಹಿಳೆಯನ್ನು ಕೊಣನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೊಣನೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net