ಉರುಳಿಬಿದ್ದ ಕಂಟೈನರ್, ಚಾಲಕನಿಗೆ ತೀವ್ರ ಗಾಯ

12HSN1
Published on

ಹಾಸನ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುರುವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ರಸ್ತೆಗೆ ಉರುಳಿ ಬಿದ್ದು ಚಾಲಕ ಗಂಭೀರ ಗಾಯಗೊಂಡಿದ್ದಾನೆ.

ಆಲೂರು ತಾಲೂಕಿನ ಪಾಳ್ಯ ಸಮೀಪ ಘಟನೆ ನಡೆದಿದ್ದು, ಕನಕಪುರ ಮೂಲದ ಚಾಲಕ ಶ್ರೀಕಾಂತ್ (39) ಎಂಬುವರಿಗೆ ಏಟಾಗಿದೆ. ಕಂಟೈನರ್ ಮಂಗಳೂರಿನಿಂದ ಪ್ಲಾಸ್ಟಿಕ್ ವಸ್ತುಗಳನ್ನು ತುಂಬಿಕೊಂಡು ಬೆಂಗಳೂರಿಗೆ ಹೋಗುತ್ತಿತ್ತು. ಅಪಘಾತದಲ್ಲಿ ಶ್ರೀಕಾಂತ್ ಅವರ ಕಣ್ಣು ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಏಟು ಬಿದ್ದಿದ್ದು ರಕ್ತಸ್ರಾವವಾಗಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು.

ನಂತರ ಅವರನ್ನು ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಆಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net