ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ, ಟ್ರಾೃಕ್ಟರ್ ಜಖಂ

30HSN4
Published on

ಹಾಸನ: ರಾಷ್ಟ್ರೀಯ ಹೆದ್ದಾರಿ 75ರ ಗಾಡೇನಹಳ್ಳಿ ಕೆಇಬಿ ಕೇಂದ್ರದ ಬಳಿ ಸೋಮವಾರ ಸಂಜೆ ಸಂಭವಿಸಿದ ಟ್ರಾೃಕ್ಟರ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ಅಪಘಾತದಲ್ಲಿ ಟ್ರಾೃಕ್ಟರ್ ಸಂಪೂರ್ಣ ಜಖಂಗೊಂಡಿದ್ದು ಚಾಲಕ ಗಂಭೀರ ಗಾಯಗೊಂಡಿದ್ದಾನೆ.

ಹಾಸನದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವೇಗವಾಗಿ ಚಲಿಸುತ್ತಿತ್ತು. ಏಕಮುಖ ಸಂಚಾರ ರಸ್ತೆಯಲ್ಲಿ ನಿಯಮ ಉಲ್ಲಂಘಿಸಿ ಎದುರುಗಡೆಯಿಂದ ಬರುತ್ತಿದ್ದ ಟ್ರಾೃಕ್ಟರ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಎರಡೂ ವಾಹನಗಳು ವೇಗದಲ್ಲಿದ್ದ ಕಾರಣ ಡಿಕ್ಕಿ ರಭಸ ಜೋರಾಗಿ ಟ್ರಾೃಕ್ಟರ್ ಎರಡು ಹೋಳಾದರೆ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆಯಿತು.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾಂತಿಗ್ರಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net