ಮಹಾಕಾಳಿ ವಿಗ್ರಹ ಭಗ್ನ ಪ್ರಕರಣ: ಸ್ಥಳ ಪರಿಶೀಲನೆ ನಡೆಸಿದ ಸಂಸದ ಪ್ರಜ್ವಲ್ ರೇವಣ್ಣ

14387037-7876-4634-b324-a604c635d1b4
Published on

ಹಾಸನ: ತಾಲೂಕಿನ ದೊಡ್ಡಗದ್ದವಳ್ಳಿ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿದ ಸಂಸದ ಪ್ರಜ್ವಲ್ ರೇವಣ್ಣ, ಕಳೆದ ಗುರುವಾರ ಹಾನಿಗೀಡಾಗಿರುವ ಮಹಾಕಾಳಿ ವಿಗ್ರಹ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ಪ್ರಾಚೀನ ದೇವಾಲಯಗಳ ರಕ್ಷಣೆ ನಮ್ಮೆಲ್ಲರ ಹೊಣೆ. ಮಹಾಕಾಳಿ ವಿಗ್ರಹ ಭಗ್ನಗೊಂಡಿರುವುದು ನೋವಿನ ಸಂಗತಿ. ಸಮರ್ಪಕ ತನಿಖೆ ನಡೆಸಿ ಘಟನೆಗೆ ಏನು ಕಾರಣ ಎಂಬುದನ್ನು ಪತ್ತೆ ಹಚ್ಚಬೇಕು. ನಿಧಿಗಾಗಿ ವಿಗ್ರಹ ನಾಶ ಪಡಿಸಿದ್ದರೆ ಶೀಘ್ರವೇ ಆರೋಪಿಗಳನ್ನು ಬಂಧಿಸಬೇಕು ಎಂದು ಅಪರ ಪೋಲಿಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ಅವರಿಗೆ ಸೂಚನೆ ನೀಡಿದರು.

ಪ್ರಮುಖ ದೇವಾಲಯಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡಬೇಕು. ಜತೆಗೆ ಅಗತ್ಯವಿರುವ ಕಡೆಗಳಲ್ಲಿ ಸಿ.ಸಿ ಕ್ಯಾಮರಾ ಅಳವಡಿಸಬೇಕು ಎಂದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಚ್. ಪಿ. ಸ್ವರೂಪ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ನಾಗರಾಜ್ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net