ಫೋಟೋ ತೆಗೆಸಿಕೊಳ್ಳಲು ಹೋದ ಯುವಕನಿಗಾಗಿ ಕಾದಿದ್ದ ಜವರಾಯ: ಅಮವಾಸ್ಯೆಯಂದೇ ದುರ್ಘಟನೆ

Death
Published on

ಹಾಸನ: ಫೋಟೋ ತೆಗೆಸಿಕೊಳ್ಳಲು ಹೋದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಕಾಡುಮನೆ ಸಮೀಪದ ಗುಡಾಣಕೆರೆ ಗ್ರಾಮದಲ್ಲಿ ನಡೆದಿದೆ.

ರತನ್ (26) ಮೃತಪಟ್ಟ ದುರ್ದೈವಿಯಾಗಿದ್ದು, ಈತ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಕಳೆದ ರಾತ್ರಿಯಷ್ಟೇ ಬೆಂಗಳೂರಿನಿಂದ ಮಹಾಲಯ ಅಮಾವಸ್ಯೆ ಅಂಗವಾಗಿ ಊರಿಗೆ ಬಂದಿದ್ದ ಎಂದು ತಿಳಿದುಬಂದಿದೆ.

ಗುರುವಾರ ತನ್ನ ಕುಟುಂಬದ ಇತರ ನಾಲ್ಕು ಜನ ಸಂಬಂಧಿಗಳ ಜತೆ ಗುಡಾಣಕೆರೆ ಸಮೀಪವಿರುವ ಅಬ್ಬಿಗುಂಡಿ ಜಲಪಾತಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಮುಳುಗುತಜ್ಞರ ಸಹಾಯದಿಂದ ಮೃತದೇಹವನ್ನು ತೆಗೆಯಲಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net