ಸಂಶೋಧನಾ ಮನೋಭಾವ ಬೆಳೆಸಲು ಎಐ ಸಹಕಾರಿ

ಪ್ರೊ.ಡಾ.ಎನ್.ಆರ್.ಪ್ರದೀಪ್ ಕುಮಾರ್ ಹೇಳಿಕೆ
ಸಂಶೋಧನಾ ಕಾರ್ಯಾಗಾರ
ನವ್‌ಕಿಸ್ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಎರಡು ದಿನಗಳ ಕಾಲ ಆಯೋಜಿಸಿದ್ದ ಸಂಶೋಧನಾ ಕಾರ್ಯಾಗಾರ ಉದ್ಘಾಟಿಸಿ ಪ್ರೊ.ಡಾ.ಎನ್.ಆರ್.ಪ್ರದೀಪ್ ಕುಮಾರ್ ಮಾತನಾಡಿದರು. ಡಾ.ಎಂ.ಬಿ.ಸಂಜಯ್ ಪಾಂಡೆ, ಡಾ.ಎಂ.ಎಸ್.ಸತೀಶ ಇದ್ದರು.
Published on: 

ಹಾಸನ: ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವವನ್ನು ಬೆಳೆಸುವುದು ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗದ ಉದ್ದೇಶ ಎಂದು ಬೆಂಗಳೂರಿನ ಹರ್ಷ ತಾಂತ್ರಿಕ ಮಹಾವಿದ್ಯಾಲಯದ ಪ್ರೊ.ಡಾ.ಎನ್.ಆರ್.ಪ್ರದೀಪ್ ಕುಮಾರ್ ಹೇಳಿದರು.

ನವ್‌ಕಿಸ್ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಎರಡು ದಿನಗಳ ಕಾಲ ಆಯೋಜಿಸಿದ್ದ ಸಂಶೋಧನಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಸಂಶೋಧನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಮತ್ತು ಭವಿಷ್ಯದ ಶೈಕ್ಷಣಿಕ ಹಾಗೂ ವೃತ್ತಿಪರ ಜೀವನದಲ್ಲಿ ಯಶಸ್ಸು ಸಾಧಿಸಲು ಕೃತಕ ಬುದ್ಧಿಮತ್ತೆ ಕಾರ್ಯಾಗಾರ ಉತ್ತಮ ವೇದಿಕೆಯಾಗಿದೆ. ಸಂಶೋಧನಾ ಪ್ರಬಂಧಗಳಾಗಿ ರೂಪಿಸುವ ವಿಧಾನ, ಸಂಶೋಧನಾ ಆಲೋಚನೆಗಳ ಆಯ್ಕೆ, ಪ್ರಾಜೆಕ್ಟ್ ವಿನ್ಯಾಸ ಮತ್ತು ಅಭಿವೃದ್ಧಿ, ವೈಜ್ಞಾನಿಕ ಬರವಣಿಗೆ ಹಾಗೂ ಸಂಶೋಧನಾ ಪ್ರಬಂಧಗಳ ಪ್ರಕಟಣೆಯ ಕುರಿತು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ತಮ್ಮ ಆಲೋಚನೆಯಿಂದ ಸಂಶೋಧನೆ, ನಿರ್ಮಾಣ, ಬರವಣಿಗೆ ಮತ್ತು ಪ್ರಕಟಣೆಯವರೆಗೆ ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಲಿದೆ ಎಂದರು.

ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವವನ್ನು ಬೆಳೆಸುವುದು ಈ ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ. ನವೀನ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರುವುದು ಮತ್ತು ವಿದ್ಯಾರ್ಥಿಗಳ ಸಂಶೋಧನಾ ಕಾರ್ಯ ಗುಣಮಟ್ಟದ ಪ್ರಬಂಧಗಳಾಗಿ ರೂಪಿಸಿ ಪ್ರಕಟಿಸುವ ಕೌಶಲವನ್ನು ಅಭಿವೃದ್ಧಿಪಡಿಸುವುದಾಗಿದೆ. ಈ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ತಮ್ಮ ತಾಂತ್ರಿಕ ಜ್ಞಾನವನ್ನು ವಿಸ್ತರಿಸಿಕೊಳ್ಳಲು, ಸಂಶೋಧನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಮತ್ತು ಭವಿಷ್ಯದ ಶೈಕ್ಷಣಿಕ ಹಾಗೂ ವೃತ್ತಿಪರ ಜೀವನದಲ್ಲಿ ಯಶಸ್ಸು ಸಾಧಿಸಲು ಉತ್ತಮ ವೇದಿಕೆಯಾಗಲಿದೆ ಎಂದರು.

ಪ್ರಾಂಶುಪಾಲ ಡಾ.ಎಂ.ಬಿ.ಸಂಜಯ್ ಪಾಂಡೆ, ಡಾ.ಎಂ.ಎಸ್.ಸತೀಶ, ಕಾರ್ಯಾಗಾರದ ಸಂಚಾಲಕ ಡಾ.ವಿ.ಎನ್.ವಿನಯ್ ಕುಮಾರ್ ಉಪಸ್ಥಿತರಿದ್ದರು.