ಸಾರ್ವಜನಿಕರು ಖುದ್ದು ಹಾಜರಾಗಿ ಮನವಿಗಳನ್ನು ನೀಡಲು ತೆರೆಯಲಾದ ಕೌಂಟರ್‌ಗಳಲ್ಲಿ ಅರ್ಜಿಗಳನ್ನು ದಾಖಲಿಸಿಕೊಂಡು ಟೋಕನ್ ನಂಬರ್‌ಗಳನ್ನು ಸ್ವೀಕರಿಸಿ ತಮ್ಮ ಅಹವಾಲನ್ನು ಸಲ್ಲಿಸಿದರು. ಒಟ್ಟು 786 ಅರ್ಜಿಗಳನ್ನು ಸ್ವೀಕರಿಸಲಾಯಿತು. ಸಂಸದ ಶ್ರೇಯಸ್ ಎಂ.ಪಟೇಲ್, ಶಾಸಕ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ತಹಸೀಲ್ದಾರ್ ಜಿ.ಎಸ್. ಶಂಕರಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಅಪರ ಜಿಲ್ಲಾಧಿಕಾರಿ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ಹೆಚ್ಚುವರಿ ಪೊಲೀಸ್ ವರಿಷ್ಠ ಅಧಿಕಾರಿ ತಮ್ಮಯ್ಯ, ಉಪ ವಿಭಾಗಾಧಿಕಾರಿಗಳಾದ ಜಗದೀಶ್ ಗಂಗಣ್ಣನವರ್, ರಾಜೇಶ್ ಕೆಡಿಪಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.