ಮಹಿಳೆಯರಿಗೆ ರಾಜಕೀಯದಲ್ಲಿ ಶೇ.33 ಮೀಸಲು

ಅರಕಲಗೂಡಿನಲ್ಲಿ ಹಮ್ಮಿಕೊಂಡಿದ್ದ ಐಸಿಡಿಎಸ್ ಸುವರ್ಣ ಸಂಭ್ರಮ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕ ಸುಂದರೇಶ್ ಡಿ. ಉಡುವಾರೆ ಅವರ ಕೃತಿಯನ್ನು ಬಿಡುಗಡೆ ಮಾಡಲಾಯಿತು. ಶಾಸಕ ಎ. ಮಂಜು, ಚಂದ್ರಕಲಾ, ವೆಂಕಟೇಶ್, ಸಂತೋಷ್, ಮೀನಾ, ಸುಂದರೇಶ್ ಇತರರಿದ್ದರು.
ಅರಕಲಗೂಡಿನಲ್ಲಿ ಹಮ್ಮಿಕೊಂಡಿದ್ದ ಐಸಿಡಿಎಸ್ ಸುವರ್ಣ ಸಂಭ್ರಮ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕ ಸುಂದರೇಶ್ ಡಿ. ಉಡುವಾರೆ ಅವರ ಕೃತಿಯನ್ನು ಬಿಡುಗಡೆ ಮಾಡಲಾಯಿತು. ಶಾಸಕ ಎ. ಮಂಜು, ಚಂದ್ರಕಲಾ, ವೆಂಕಟೇಶ್, ಸಂತೋಷ್, ಮೀನಾ, ಸುಂದರೇಶ್ ಇತರರಿದ್ದರು.
Published on
ಅರಕಲಗೂಡು : ರಾಜಕೀಯವಾಗಿ ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಜಾರಿಯಾಗಲಿದ್ದು, ಚುನಾವಣೆಯಲ್ಲಿ ಉತ್ತಮರನ್ನು ಆಯ್ಕೆ ಮಾಡಬೇಕು ಎಂದು ಶಾಸಕ ಎ. ಮಂಜು ಹೇಳಿದರು.
ತಾಲೂಕಿನ ರಾಮನಾಥಪುರ ಕಾವ್ಯಾಂಜಲಿ ಕಲ್ಯಾಣ ಮಂಟಪದಲ್ಲಿ ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ಐಸಿಡಿಎಸ್ ಸುವರ್ಣ ಸಂಭ್ರಮ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಮಾನತೆ ಸಾಧಿಸುವಂತಾಗಬೇಕು. ಮುಂದಿನ ದಿನಗಳಲ್ಲಿ ವಿಧಾನಸಭೆ ಮತ್ತು ಸಂಸತ್ ಸದಸ್ಯರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸಿಗಲಿದ್ದು ಚುನಾವಣೆಯಲ್ಲಿ ಉತ್ತಮರನ್ನು ಆಯ್ಕೆ ಮಾಡುವ ಹೊಣೆಗಾರಿಕೆ ನಿಮ್ಮದಾಗಲಿದೆ ಎಂದರು.
ನಮ್ಮ ತಾಯಂದಿರ ಕಾಲಕ್ಕೆ ಹೋಲಿಸಿದರೆ ಈಗ ಸಮಾಜದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸರ್ಕಾರಗಳು ಮಹಿಳೆಯರ ಸಬಲೀಕರಣಕ್ಕಾಗಿ ರೂಪಿಸಿರುವ ಹಲವಾರು ಯೋಜನೆಗಳು ಕಾರಣವಾಗಿವೆ ಎಂದು ತಿಳಿಸಿದರು.
ಅರಕಲಗೂಡು ತಾಲೂಕು ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದ್ದು, ಲೇಖಕ ಸುಂದರೇಶ್ ಡಿ. ಉಡುವಾರೆ ಅವರು ತಾಲೂಕಿನ ಇತಿಹಾಸದ ಕುರಿತು ರಚಿಸಿರುವ ಪುಸ್ತಕದಲ್ಲಿ ಸಾಕಷ್ಟು ಮಾಹಿತಿ ಇದೆ ಎಂದು ತಿಳಿಸಿದರು.
ಮಲ್ಲಿಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಚಂದ್ರಕಲಾ ಮಾತನಾಡಿ, ಮಹಿಳೆಯರು ಅನೇಕ ಕ್ಷೇತ್ರಗಳಲ್ಲಿ ಗಮನಾರ್ಹವಾದ ಸಾಧನೆ ಮಾಡುತ್ತಿದ್ದಾರೆ. ಉನ್ನತ ಶಿಕ್ಷಣ ಪಡೆಯುವ ಮೂಲಕ ಮತ್ತಷ್ಟು ಸಾಧನೆ ಮಾಡಬೇಕು. ಎಲ್ಲ ವಿಭಾಗದಲ್ಲೂ ಪ್ರಾತಿನಿಧ್ಯ ಗಳಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಲೇಖಕ ಸುಂದರೇಶ್ ಡಿ. ಉಡುವಾರೆ ಅವರು ಬರೆದಿರುವ ಅರಕಲಗೂಡು ಗತ ವೈಭವ ಗ್ರಂಥ ಪುಸ್ತಕ ಬಿಡುಗಡೆ ಮಾಡಲಾಯಿತು. ಸಿಡಿಪಿಒ ವೆಂಕಟೇಶ್, ಎಐಸಿಟಿಯು ಕಾರ್ಯದರ್ಶಿ ಮೀನಾ ಇತರರಿದ್ದರು. ಅಂಗನವಾಡಿ ನಿವೃತ್ತ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಮಹಿಳೆಯರು, ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಗರ್ಭಿಣಿ ಮಹಿಳೆಯರಿಗೆ ಮಡಿಲು ತುಂಬಿಸಿ ಸೀಮಂತ ಕಾರ್ಯ ನೆರವೇರಿಸಲಾಯಿತು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net