ದಂಡ ಪಾವತಿಗೆ ಶೇ. 50 ರಿಯಾಯಿತಿ

ದಾಖಲಾದ ಪ್ರಕರಣ
ದಾಖಲಾದ ಪ್ರಕರಣ
Published on
ಸಕಲೇಶಪುರ: ಸಾರಿಗೆ ಇಲಾಖೆಯಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ದಂಡದ ಮೊತ್ತದ ಮೇಲೆ ರಾಜ್ಯ ಸರ್ಕಾರ ಶೇ.50 ರಿಯಾಯಿತಿ ಘೋಷಿಸಿದ್ದು, ವಾಹನ ಮಾಲೀಕರು ಈ ವಿಶೇಷ ಅವಕಾಶ ಬಳಸಿಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಇಲಾಖೆ ಮನವಿ ಮಾಡಿದೆ.
1991ರಿಂದ 2022ರ ಅವಧಿಯಲ್ಲಿ ದಾಖಲಾದ ಪ್ರಕರಣಗಳ ದಂಡ ಪಾವತಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ. ಇದಕ್ಕಾಗಿ ಜೂನ್ 21ರಿಂದ ಜುಲೈ 10ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಬಾಕಿ ಪ್ರಕರಣಗಳ ದಂಡದ ಮೊತ್ತದ ಶೇ.50ರಷ್ಟನ್ನು ವಾಹನ ಮಾಲೀಕರು ಪಾವತಿಸಿ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಸಕಲೇಶಪುರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net