ಕಡೇಗರ್ಜೆ ಗ್ರಾಮದ ಸಮೀಪದದ ಬೇಲೂರು-ಸಕಲೇಶಪುರ ರಾಜ್ಯ ಹೆದ್ದಾರಿ ರಸ್ತೆ ದಾಟುತ್ತಿರುವ ಕಾಡಾನೆಗಳ ಹಿಂಡು.
Published on:
Copied
Follow Us
ಬೇಲೂರು: ತಾಲೂಕಿನ ಕಡೇಗರ್ಜೆ ಗ್ರಾಮದಲ್ಲಿ ಶನಿವಾರ ಬೆಳಗ್ಗೆ 25ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ತೆರಳಲು ಬೇಲೂರು-ಸಕಲೇಶಪುರ ರಾಜ್ಯ ಹೆದ್ದಾರಿ ರಸ್ತೆ ದಾಟಿ ತೋಟದತ್ತ ಹೋಗಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಒಂದೇ ಬಾರಿಗೆ 25ಕ್ಕೂ ಹೆಚ್ಚು ಕಾಡಾನೆಗಳು ಸಮೀಪದ ಅರಣ್ಯ ಪ್ರದೇಶದಿಂದ ಮುಖ್ಯರಸ್ತೆ ಮೂಲಕವೇ ರಸ್ತೆ ದಾಟಿ ಮತ್ತೊಂದು ಭಾಗಕ್ಕೆ ಸಾಗುತ್ತಿರುವುದನ್ನು ಸಾರ್ವಜನಿಕರು ಗಮನಿಸಿ ವಾಹನಗಳನ್ನು ಕೆಲ ಸಮಯ ದೂರದಲ್ಲೇ ನಿಲ್ಲಿಸಿದ್ದಾರೆ. ಜತೆಗೆ ಕಾಡಾನೆಗಳು ಒಂದರ ಹಿಂದೆ ಒಂದರಂತೆ ರಸ್ತೆ ದಾಟಿದ್ದು ನೋಡುಗರ ಮೈ ಜುಮ್ಮೆನಿಸುತ್ತಿತ್ತು.
ಆನೆಗಳು ಬೇಲೂರು-ಸಕಲೇಶಪುರ ರಾಜ್ಯ ಹೆದ್ದಾರಿ ರಸ್ತೆ ದಾಟುವುದನ್ನು ನೋಡಿದ ಸಾರ್ವಜನಿಕರು ತಮ್ಮ ಮೊಬೈಲ್‌ಗಳಲ್ಲಿ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲ ತಾಣಗಳಲ್ಲಿ ಬಿಟ್ಟಿದ್ದಾರೆ. ಏಕಕಾಲದಲ್ಲಿ ಇಷ್ಟೊಂದು ಸಂಖ್ಯೆಯ ಕಾಡಾನೆಗಳು ಗ್ರಾಮದ ಮನೆಗಳ ಆಸು ಪಾಸಿನಲ್ಲೇ ಕಾಣಿಸಿ ಕೊಂಡಿರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಿಸಿದೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ತಮ್ಮ ಬೆಳೆ ಹಾಗೂ ಆಸ್ತಿಪಾಸ್ತಿಗಳ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.