ಹೊತ್ತಿ ಉರಿದ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ

 ಬೇಲೂರು ತಾಲೂಕಿನ ಹೆಬ್ಬಾಳು ಸಮೀಪದ ಬೇಲೂರು-ಹಳೇಬೀಡು ರಸ್ತೆಯಲ್ಲಿ ಸೋಮವಾರ ಕಲ್ಲಿದ್ದಲು ತುಂಬಿಕೊಂಡು ಸಾಗುತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಕಿ ನಂದಿಸುವಲ್ಲಿ ಮುಂದಾದ ಅಗ್ನಿಶಾಮಕ ದಳದ ಸಿಬ್ಬಂದಿ.
ಬೇಲೂರು ತಾಲೂಕಿನ ಹೆಬ್ಬಾಳು ಸಮೀಪದ ಬೇಲೂರು-ಹಳೇಬೀಡು ರಸ್ತೆಯಲ್ಲಿ ಸೋಮವಾರ ಕಲ್ಲಿದ್ದಲು ತುಂಬಿಕೊಂಡು ಸಾಗುತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಕಿ ನಂದಿಸುವಲ್ಲಿ ಮುಂದಾದ ಅಗ್ನಿಶಾಮಕ ದಳದ ಸಿಬ್ಬಂದಿ.
Published on
ಬೇಲೂರು: ತಾಲೂಕಿನ ಹೆಬ್ಬಾಳು ಸಮೀಪದ ಬೇಲೂರು-ಹಳೇಬೀಡು ರಸ್ತೆಯಲ್ಲಿ ಸೋಮವಾರ ಕಲ್ಲಿದ್ದಲು ತುಂಬಿಕೊಂಡು ಸಾಗುತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಲಾರಿಯ ಮುಂಭಾಗ ಸಂಪೂರ್ಣ ಹೊತ್ತಿ ಉರಿದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಂಗಳೂರಿನಿಂದ ಹಿರಿಯೂರು ಕಡೆಗೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಬೇಲೂರು ತಾಲೂಕಿನ ಹೆಬ್ಬಾಳು ಗ್ರಾಮದ ಸಮೀಪ ಬೇಲೂರು-ಹಳೇಬೀಡು ರಸ್ತೆಯಲ್ಲಿ ತೆರಳುತಿದ್ದ ಸಂದರ್ಭ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣವೇ ಲಾರಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಕೆಳಗಿಳಿದು ಏನಾಯಿತು ಎಂದು ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಲಾರಿಯ ಮುಂಭಾಗ ಬಹುತೇಕ ವ್ಯಾಪಿಸಿ ಚಾಲಕನ ಕಣ್ಣೆದುರೇ ಸುಟ್ಟು ಹೋಗಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ನಿಯಂತ್ರಣಕ್ಕೆ ತಂದರೂ ಲಾರಿ ಮುಂಭಾಗ ಮಾತ್ರ ಪೂರ್ತಿ ಸುಟ್ಟು ಹೋಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net