ಜ್ಞಾನಪ್ರಭಾ ಶಾಲೆ ಮಕ್ಕಳ ಸಾಧನೆ

ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಹಿರೀಸಾವೆ ಜ್ಞಾನಪ್ರಭಾ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಆಟಗಳಲ್ಲಿ ಗೆಲುವು ಸಾಧಿಸಿ ಪದಕಗಳನ್ನು ಪಡೆದುಕೊಂಡಿದ್ದಾರೆ. ನಿಖಿಲ್ ಆಂತೋನಿ ಇದ್ದರು.
ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಹಿರೀಸಾವೆ ಜ್ಞಾನಪ್ರಭಾ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಆಟಗಳಲ್ಲಿ ಗೆಲುವು ಸಾಧಿಸಿ ಪದಕಗಳನ್ನು ಪಡೆದುಕೊಂಡಿದ್ದಾರೆ. ನಿಖಿಲ್ ಆಂತೋನಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹಾಸನದಲ್ಲಿ ಆಯೋಜಿಸಿದ್ದ ಕ್ರೀಡಾಕೂಟ

ಹಿರೀಸಾವೆ: ಜಿಲ್ಲಾ ಕೇಂದ್ರ ಹಾಸನದಲ್ಲಿ ನವದೆಹಲಿಯ ಕೌನ್ಸಿಲ್ ಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೆಟ್ ಎಕ್ಸಾಮಿನೇಷನ್ಸ್ (ಸಿಐಎಸ್‌ಸಿಇ), ಗೋಣಿಕೊಪ್ಪದ ಕರುಂಬಯ್ಯ ಲರ್ನಿಂಗ್ ಆ್ಯಂಡ್ ಸ್ಪೋರ್ಟ್ಸ್ ಅಕಾಡೆಮಿ

ಹಾಗೂ ಪೋದರ್ ಇಂಟರ್ ನ್ಯಾಷನಲ್ ಶಾಲೆ ಸಹಯೋಗದಲ್ಲಿ ಇತ್ತೀಚೆಗೆ ವಲಯವಾರು ಏರ್ಪಡಿಸಿದ್ದ ವಿವಿಧ ಕ್ರೀಡಾಕೂಟಗಳಲ್ಲಿ ತಾಲೂಕಿನ ಹಿರೀಸಾವೆ ಜ್ಞಾನಪ್ರಭಾ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ್ದಾರೆ.
14ರಿಂದ 17 ವರ್ಷ ವಯೋಮಿತಿಯ ಬಾಲಕರು ಹಾಗೂ ಬಾಲಕಿಯರ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿದ್ದು, 14 ವರ್ಷ ವಯೋಮಿತಿಯ ಬಾಲಕಿಯರ ಅಥ್ಲೆಟಿಕ್ಸ್ ವಿಭಾಗದಲ್ಲಿ ಹರ್ಷಿತಾ ಆರ್. 80 ಮೀಟರ್ ಹರ್ಡಲ್ಸ್‌ನಲ್ಲಿ ಪ್ರಥಮ, ಹಾಗೂ 100 ಮೀಟರ್ ಓಟದಲ್ಲಿ ದ್ವಿತೀಯ, ಚಂದನಪ್ರಿಯಾ ಎತ್ತರ ಜಿಗಿತ ಸ್ಪರ್ಧೆಯಲ್ಲಿ ತೃತೀಯ, ದ್ಯುತಿಶ್ರೀ 600 ಮೀಟರ್ ಓಟದಲ್ಲಿ ತೃತೀಯ ಹಾಗೂ 4x100 ಮೀಟರ್ ರಿಲೇ ಓಟದಲ್ಲಿ ಹರ್ಷಿತಾ ಆರ್, ದಿಶಾ, ಚಂದನಪ್ರಿಯಾ ಹಾಗೂ ದ್ಯುತಿಶ್ರೀ ಅವರನ್ನೊಳಗೊಂಡ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಖೋ - ಖೋ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪಿ.ಪವನ್ ದ್ವಿತೀಯ, ಜಿ. ಉತ್ತಮ್ 80 ಮೀಟರ್ ಹರ್ಡಲ್ಸ್‌ನಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಖೋ - ಖೋ ಬಾಲಕರ ತಂಡ ತೃತೀಯ ಸ್ಥಾನ ಪಡೆದಿರುತ್ತಾರೆ. 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಎಂ.ಎನ್.ತೇಜಸ್ವಿನಿ ತೃತೀಯ, ಕರಾಟೆಯಲ್ಲಿ ಅಪೇಕ್ಷಾ ದ್ವಿತೀಯ, 4x100 ಹಾಗೂ 4x400 ಮೀಟರ್ ಓಟದ ರಿಲೇ ಸ್ಪರ್ಧೆಯಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿರುತ್ತಾರೆ.
ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಶಾಲೆಗೆ ಪದಕಗಳು ಹಾಗೂ ಪ್ರಶಸ್ತಿ ಪತ್ರಗಳನ್ನು ಗೆದ್ದ ಎಲ್ಲ ವಿದ್ಯಾರ್ಥಿಗಳನ್ನು ಹಾಗೂ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಿಖಿಲ್ ಆಂತೋನಿ ಅವರನ್ನು ಸಂಸ್ಥೆಯ ಅಧ್ಯಕ್ಷ ಎ.ಜಿ.ಪ್ರಭಾಕರ್, ಕಾರ್ಯದರ್ಶಿ ಎಂ.ಕೆ.ಹರೀಶ್ ಹಾಗೂ ಶಾಲೆಯ ಪ್ರಾಂಶುಪಾಲ ಬಿ.ಸಂಜಯ್ ಕ್ರಿಸ್ಟೋಫರ್ ಅಭಿನಂದಿಸಿದರು.
ಶಿಕ್ಷಕರಿಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net