ಕ್ರೀಡೆಯಲ್ಲಿ ಜೆಎಸ್‌ಎಸ್ ಶಾಲಾ ಮಕ್ಕಳ ಸಾಧನೆ

 ಬಾಗೆಯ ಜೆಎಸ್‌ಎಸ್ ಶಾಲೆಯಲ್ಲಿ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಪದಕ ವಿಜೇತ ವಿದ್ಯಾರ್ಥಿಗಳನ್ನು ಶಿಕ್ಷಕರು ಅಭಿನಂದಿಸಿದರು. ಪ್ರಾಂಶುಪಾಲ ಮಧುಕುಮಾರ್ ಉಪಸ್ಥಿತರಿದ್ದರು.
ಬಾಗೆಯ ಜೆಎಸ್‌ಎಸ್ ಶಾಲೆಯಲ್ಲಿ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಪದಕ ವಿಜೇತ ವಿದ್ಯಾರ್ಥಿಗಳನ್ನು ಶಿಕ್ಷಕರು ಅಭಿನಂದಿಸಿದರು. ಪ್ರಾಂಶುಪಾಲ ಮಧುಕುಮಾರ್ ಉಪಸ್ಥಿತರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • JSS School Students

ಸಕಲೇಶಪುರ: ತಾಲೂಕಿನ ಬಾಗೆ ಜೆಎಸ್‌ಎಸ್ ಶಾಲೆಯಲ್ಲಿ ಹಾಸನ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಸಂಸ್ಥೆ ಸಹಯೋಗದಲ್ಲಿ 2026ರ ಜಿಲ್ಲಾ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ಕ್ರೀಡಾಕೂಟ ನೇರವೆರಿತು.

ಕ್ರೀಡಾಕೂಟದಲ್ಲಿ ಜಿಲ್ಲೆಯ ಹಲವು ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ ಪ್ರದರ್ಶನ ನೀಡಿದರು. ಕ್ರೀಡಾಕೂಟದಲ್ಲಿ ಜೆಎಸ್‌ಎಸ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಜಿಷ್ಣು ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರೆ, 60 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಹರ‌್ಡಲ್ಸ್ ಸ್ಪರ್ಧೆಯಲ್ಲಿ ಹರ್ಷಿತ್ ಕುಮಾರ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಾಲೇಜು ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಲೇಖನ್ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸಾ ್ಥನ ಗಳಿಸಿದರು. ಗುಂಡು ಎಸೆತ ಹಾಗೂ ಡಿಸ್‌ಕಸ್ ಥ್ರೋ ಸ್ಪರ್ಧೆಯಲ್ಲಿ ಚಿರಾಗ್ ತೃತೀಯ ಸ್ಥಾನ ಪಡೆದಿದ್ದಾರೆ. ಜಿ.ಕೆ.ಹರ್ಷ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net