ಹಾಸನ ತಾಲೂಕಿನ ಹೊಸೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಎಐಡಿಎಸ್‌ಒಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಎಐಡಿಎಸ್‌ಯು ಜಿಲ್ಲಾ ಅಧ್ಯಕ್ಷೆ ಚೈತ್ರಾ, ಲಕ್ಷ್ಮೀ, ಕುಮಾರ್, ಗಿರೀಶ್, ದೇವರಾಜ್, ಪಾರ್ವತಿ, ಸುರೇಶ್ ಇತರರಿದ್ದರು.
ಹಾಸನ: ಕೆಪಿಎಸ್-ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆ ಮುಚ್ಚಲು ಹೊರಟಿದ್ದಾರೆ ಎಂದು ಆರೋಪಿಸಿ ಹಾಸನ ತಾಲೂಕಿನ ಹೊಸೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಎಐಡಿಎಸ್‌ಒಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಎಐಡಿಎಸ್‌ಯು ಜಿಲ್ಲಾ ಅಧ್ಯಕ್ಷೆ ಚೈತ್ರಾ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಮುಚ್ಚುವ ಮುಖಾಂತರ ಸರ್ಕಾರ ಬಡ-ರೈತ-ಕೂಲಿ ಕಾರ್ಮಿಕರ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿ, ಸಾರ್ವಜನಿಕ ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಣ ಮಾಡಲು ಹೊರಟಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಉನ್ನತ ಅಭ್ಯಾಸಕ್ಕೆ ಪ್ರೇರೇಪಣೆ ಮಾಡುವ ಬದಲಾಗಿ ಸಣ್ಣಪುಟ್ಟ ವೃತ್ತಿ ತರಬೇತಿ ನೀಡುತ್ತೇವೆಂದು ಬಣ್ಣ ಹಚ್ಚಿ ಅವರನ್ನು ಉನ್ನತ ಶಿಕ್ಷಣದಿಂದ ದೂರ ತಳ್ಳುತ್ತಿದ್ದಾರೆ ಎಂದು ಆರೋಪಿಸಿದರು.