ಕಾಡಾನೆ ಸಮಸ್ಯೆ ಪರಿಹಾರಕ್ಕೆ ಸರ್ವಪಕ್ಷ ನಿಯೋಗ ರಚನೆ

ಜಿಲ್ಲೆಯಲ್ಲಿ ಕಾಡಾನೆ-ಮಾನವ ಸಂಘರ್ಷದಿಂದ ದಶಕಗಳಿಂದ ತತ್ತರಿಸಿರುವ ಆಲೂರು, ಬೇಲೂರು, ಸಕಲೇಶಪುರ ಹಾಗೂ ಅರಕಲಗೂಡು ತಾಲೂಕುಗಳು ಸೇರಿದಂತೆ ಮೂರು ಜಿಲ್ಲೆಗಳ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ಉದ್ದೇಶದಿಂದ ನಗರದ ರೆಡ್‌ಕ್ರಾಸ್ ಭವನದಲ್ಲಿ ಸರ್ವಪಕ್ಷ, ಸರ್ವ ಸಂಘಟನೆಗಳ ಸಭೆ ನಡೆಯಿತು. ಎಚ್.ಕೆ.ಸುರೇಶ್, ಎಚ್.ಕೆ.ಕುಮಾರಸ್ವಾಮಿ, ವೆಂಕಟೇಶ್‌ಮೂರ್ತಿ ಇತರರಿದ್ದರು.
ಜಿಲ್ಲೆಯಲ್ಲಿ ಕಾಡಾನೆ-ಮಾನವ ಸಂಘರ್ಷದಿಂದ ದಶಕಗಳಿಂದ ತತ್ತರಿಸಿರುವ ಆಲೂರು, ಬೇಲೂರು, ಸಕಲೇಶಪುರ ಹಾಗೂ ಅರಕಲಗೂಡು ತಾಲೂಕುಗಳು ಸೇರಿದಂತೆ ಮೂರು ಜಿಲ್ಲೆಗಳ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ಉದ್ದೇಶದಿಂದ ನಗರದ ರೆಡ್‌ಕ್ರಾಸ್ ಭವನದಲ್ಲಿ ಸರ್ವಪಕ್ಷ, ಸರ್ವ ಸಂಘಟನೆಗಳ ಸಭೆ ನಡೆಯಿತು. ಎಚ್.ಕೆ.ಸುರೇಶ್, ಎಚ್.ಕೆ.ಕುಮಾರಸ್ವಾಮಿ, ವೆಂಕಟೇಶ್‌ಮೂರ್ತಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾಡಾನೆ ಸಮಸ್ಯೆ ಪರಿಹಾರಕ್ಕೆ ಸರ್ವಪಕ್ಷ ನಿಯೋಗ ರಚನೆ
  • ರಾಜ್ಯ, ಕೇಂದ್ರ ಸರ್ಕಾರಗಳನ್ನು ಭೇಟಿ ಮಾಡಿ ಮನವರಿಕೆ ಮಾಡಲು ತೀರ್ಮಾನ
ಹಾಸನ: ಜಿಲ್ಲೆಯಲ್ಲಿ ಕಾಡಾನೆ-ಮಾನವ ಸಂಘರ್ಷದಿಂದ ದಶಕಗಳಿಂದ ತತ್ತರಿಸಿರುವ ಆಲೂರು, ಬೇಲೂರು, ಸಕಲೇಶಪುರ ಹಾಗೂ ಅರಕಲಗೂಡು ತಾಲೂಕುಗಳು ಸೇರಿದಂತೆ ಮೂರು ಜಿಲ್ಲೆಗಳ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ಉದ್ದೇಶದಿಂದ ಸೋಮವಾರ ನಗರದ ರೆಡ್‌ಕ್ರಾಸ್ ಭವನದಲ್ಲಿ ಸರ್ವಪಕ್ಷ, ಸರ್ವ ಸಂಘಟನೆಗಳ ಸಭೆ ನಡೆಯಿತು.
ಸಭೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ಮುಂದುವರಿದಿರುವ ಕಾಡಾನೆ ಸಮಸ್ಯೆಯಿಂದ ಸಂಭವಿಸುತ್ತಿರುವ ಮಾನವ ಜೀವಹಾನಿ ಹಾಗೂ ಅಪಾರ ಪ್ರಮಾಣದ ಬೆಳೆ ನಷ್ಟದ ಕುರಿತು ಗಂಭೀರ ಚರ್ಚೆ ನಡೆಯಿತು. ಈ ನಾಲ್ಕು ತಾಲೂಕುಗಳ ಜನರು ಪ್ರತಿದಿನವೂ ಭಯ ಮತ್ತು ಆತಂಕದಲ್ಲೇ ಬದುಕುವ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಹಲವು ನಾಯಕರು ಸಭೆಯಲ್ಲಿ ಮನದಟ್ಟು ಮಾಡಿದರು.
ಸಭೆಯಲ್ಲಿ ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್, ಎಚ್.ಕೆ.ಕುಮಾರಸ್ವಾಮಿ, ಸಂಘಟನೆಯ ಸಂಚಾಲಕ ಆರ್.ಪಿ.ವೆಂಕಟೇಶ್‌ಮೂರ್ತಿ, ರೈತ ಸಂಘದ ಮುಖಂಡ ರಾಜೇಗೌಡ, ಶಿವಣ್ಣ, ಎಚ್.ಪಿ. ಮೋಹನ್ ಇತರರು ಪಾಲ್ಗೊಂಡಿದ್ದರು.
ಶ್ರೀಲಂಕಾದಲ್ಲಿ ಅನುಸರಿಸುತ್ತಿರುವ ಕಾಡಾನೆ ನಿರ್ವಹಣೆಯ ಮಾದರಿಗಳನ್ನು ಹಂಚಿಕೊಂಡು, ಅವುಗಳನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸುವ ಸಾಧ್ಯತೆಗಳ ಕುರಿತು ಚರ್ಚಿಸಲಾಯಿತು. ಕರ್ನಾಟಕ ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಟಿ.ಪಿ. ಸುರೇಂದ್ರ ಅವರು ಕಾಡಾನೆ ಸಮಸ್ಯೆಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ನಡೆದಿರುವ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಿದರು.
ಶಾಸಕ ಹುಲ್ಲಳ್ಳಿ ಸುರೇಶ್ ಮಾತನಾಡಿ, ಕಾಡಾನೆ ಸಮಸ್ಯೆ ಪರಿಹರಿಸುವಲ್ಲಿ ಕೇಂದ್ರ ಸರ್ಕಾರದ ಪಾತ್ರ ಮಹತ್ವದ್ದು, ಆನೆಧಾಮ ಸ್ಥಾಪನೆಗೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ನಂತರ ಕೇಂದ್ರ ಸರ್ಕಾರದ ಪಾತ್ರ ಪ್ರಮುಖವಾಗುತ್ತದೆ. ಲೋಕಸಭಾ ಸದಸ್ಯರು ಕೇಂದ್ರದ ಮೇಲೆ ಒತ್ತಡ ಹೇರಬೇಕು. ರಾಜ್ಯ ಸರ್ಕಾರದಿಂದ ಮಾತ್ರ ಈ ಸಮಸ್ಯೆ ಪರಿಹಾರ ಸಾಧ್ಯವಿಲ್ಲ ಎಂದರು.
ಶಾಸಕ ಸಿಮೆಂಟ್ ಮಂಜು ಮಾತನಾಡಿ, ಮಲೆನಾಡು ಭಾಗದಲ್ಲಿ ಕಾಡಾನೆ ಸಮಸ್ಯೆಯ ಕುರಿತು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಲ್ಲಿ ನಡೆಯುತ್ತಿರುವ ಸಭೆ ಮಹತ್ವವಾಗಿದೆ ಎಂದು ಹೇಳಿದರು.
ಸಭೆಯ ಪ್ರಮುಖ ನಿರ್ಣಯಗಳು:
ಕಾಡಾನೆ ಸಮಸ್ಯೆಯ ಗಂಭೀರತೆಯನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಮುಖ್ಯಮಂತ್ರಿ, ಅರಣ್ಯ ಸಚಿವರು ಹಾಗೂ ಕೇಂದ್ರ ಸರ್ಕಾರದ ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಲು ಸರ್ವಪಕ್ಷ ನಿಯೋಗ ರಚಿಸುವುದು, ಮೂರು ಜಿಲ್ಲೆಗಳ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಶಾಸಕರು, ಸರ್ವಪಕ್ಷಗಳ ನಾಯಕರು, ಹೋರಾಟಗಾರರು, ಬೆಳೆಗಾರರು ಹಾಗೂ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಹೋರಾಟ ಸಮಿತಿ ರಚಿಸುವುದು, ಸಮಸ್ಯೆ ಪರಿಹಾರಕ್ಕೆ ಸೂಕ್ತ ಮತ್ತು ವೈಜ್ಞಾನಿಕ ಯೋಜನೆಗಳನ್ನು ರೂಪಿಸಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವುದು, ಜ.28ರಂದು ಹೋರಾಟ ಸಮಿತಿಯ ಸಭೆ ನಡೆಸಿ, ಮುಖ್ಯಮಂತ್ರಿಗಳ ಭೇಟಿ ದಿನಾಂಕವನ್ನು ನಿಗದಿಪಡಿಸುವುದು, ಸಭೆಯಲ್ಲಿ ಭಾಗವಹಿಸಿದ ನಾಯಕರು, ಕಾಡಾನೆ ಸಮಸ್ಯೆಗೆ ತಾತ್ಕಾಲಿಕ ಪರಿಹಾರಗಳಷ್ಟೇ ಅಲ್ಲದೆ ದೀರ್ಘಕಾಲಿಕ ಹಾಗೂ ವೈಜ್ಞಾನಿಕ ಕ್ರಮಗಳು ಅಗತ್ಯವಿದ್ದು, ಈ ಹೋರಾಟವನ್ನು ಒಗ್ಗಟ್ಟಿನಿಂದ ಮುಂದುವರಿಸಬೇಕೆಂದು ಅಭಿಪ್ರಾಯಪಟ್ಟರು.
ಕಾಡಾನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರಕ್ಕಾಗಿ ಶೀಘ್ರದಲ್ಲೇ ಶಾಸಕರು, ಲೋಕಸಭಾ ಸದಸ್ಯರು, ಹೋರಾಟಗಾರರು ಹಾಗೂ ಸರ್ವಪಕ್ಷಗಳ ಮುಖಂಡರನ್ನು ಒಳಗೊಂಡ ನಿಯೋಗ ಮುಖ್ಯಮಂತ್ರಿಯನ್ನು ಭೇಟಿ ಮಾಡಲಿದೆ. ಮುಂದಿನ ಸಭೆ ಜ.28ರಂದು ನಡೆಯಲಿದೆ ಎಂದು ಸಂಘಟನೆಯ ಸಂಚಾಲಕ ಆರ್.ಪಿ. ವೆಂಕಟೇಶ್ ಮೂರ್ತಿ ತಿಳಿಸಿದರು.
ಸಭೆಯಲ್ಲಿ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್, ಕೃಷ್ಣಪ್ಪ, ತೋ.ಚ. ಅನಂತ ಸುಬ್ಬರಾಯ, ಹೋರಾಟಗಾರರಾದ ಎಡೆಹಳ್ಳಿ ಮಂಜುನಾಥ್, ಧರ್ಮೇಶ್, ನವೀನ್ ಕುಮಾರ್, ಕಾಂಗ್ರೆಸ್ ಯುವ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ಅಬ್ದುಲ್ ಸಮದ್, ಬೆಕ್ಕನಹಳ್ಳಿ ನಾಗರಾಜ್, ರವಿ ನಾಕಲಗೂಡು, ಚಲಂ, ಬಾಳ್ಳು ಗೋಪಾಲ್, ಮಂಜುನಾಥ್ ದತ್ತ, ಹೆಮ್ಮಿಗೆ ಮೋಹನ್, ಡಿ.ಕೆ. ಚಂದ್ರಕಲಾ, ಹಳಸೆ ಶಿವಣ್ಣ, ಲೋಹಿತ್ ಕಾಡಳ್ಳಿ, ವಿಜಯಕುಮಾರ್, ಡೋಂಗ್ರೆ, ಸೌಮ್ಯಾ ಕಿಶೋರ್ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ್, ಜೈ ಭೀಮ್ ಮಂಜು, ಮಲ್ನಾಡ್ ಮೆಹಬೂಬ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net