

ಪ್ರಮುಖ ಮುಖ್ಯಾಂಶಗಳು
ಹಾಸನ:
ಜಿಲ್ಲೆಯಲ್ಲಿ ಮುಸುಕಿನ ಜೋಳದ ಬೆಳೆಗೆ ಬಿಳಿಸುಳಿ ರೋಗ ಬರುತ್ತಿರುವುದರಿಂದ ರೈತರು ಪರ್ಯಾಯ ಬೆಳೆ ಬೆಳೆಯುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಸುಕಿನ ಜೋಳ ಬೆಳೆಗೆ ಬಿಳಿಸುಳಿ ರೋಗ ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಿ ಪುನಃ ಅದೇ ಬೆಳೆ ಬೆಳೆದರೆ ರೋಗಬರುವ ಸಂಭವನೀಯತೆ ಹೆಚ್ಚಿದೆ. ಆ ಕಾರಣಕ್ಕೆ ರೈತರು ಎಚ್ಚರವಹಿಸಿ ಇತರೆ ಬೆಳೆಗಳನ್ನು ಬೆಳೆಯಬೇಕು ಎಂದು ತಿಳಿಸಿದರು.