ಮಾದಕ ವ್ಯಸನಿಗಳ ಪ್ರಗತಿ ಅಸಾಧ್ಯ

ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆಯ ಹೋಬಳಿಯ ಕಾಡ್ಲೂರು ಗ್ರಾಮದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಕರ್ತ ಮೋಹನ್ ಕಾಡ್ಲೂರು ಮಾತನಾಡಿದರು.ಪುಟ್ಟರಾಜು,ಜಯಲಕ್ಷ್ಮೀ, ಇಂದ್ರಮಣಿ ಇದ್ದರು.

Published on
ಆಲೂರು: ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿರುವವರು ಎಂದಿಗೂ ಪ್ರಗತಿ ಹೊಂದಲು ಸಾಧ್ಯವಿಲ್ಲ. ಮಾದಕ ವಸ್ತುಗಳ ವಿರುದ್ಧ ನಾಗರಿಕರಲ್ಲಿ ವಿದ್ಯಾರ್ಥಿಗಳು ಅರಿವು ಮೂಡಿಸಬೇಕು ಎಂದು ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕ ಪುಟ್ಟರಾಜು ಸಲಹೆ ನೀಡಿದರು.
ತಾಲೂಕಿನ ಕೆಂಚಮ್ಮನ ಹೊಸಕೋಟೆಯ ಹೋಬಳಿಯ ಕಾಡ್ಲೂರು ಗ್ರಾಮದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಗತಿಕರಿಗೆ ಮಾಸಾಶನ, ನಿರ್ಗತಿಕರಿಗೆ ವಾತ್ಸಲ್ಯ ಮನೆ ನಿರ್ಮಾಣ, ಕೃಷಿಕರಿಗೆ ಸಹಾಯಧನ, ವಿದ್ಯಾರ್ಥಿಗಳಿಗೆ, ಸಹಾಯಧನ, ಮದ್ಯ ವರ್ಜನ ಶಿಬಿರ ಸೇರಿದಂತೆ ಈ ರೀತಿ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ ಎಂದರು.
ಮಾದಕ ವಸ್ತುಗಳ ಸೇವನೆಯಿಂದ ಯುವ ಪೀಳಿಗೆ ಅನೇಕ ರೋಗಗಳಿಗೆ ಬಲಿಯಾಗುತ್ತಿದ್ದು, ಸಮಾಜದಲ್ಲಿ ಜಾಗೃತಿಯ ಮೂಲಕ ಮಾದಕ ವಸ್ತುಗಳ ಸೇವನೆ ನಿಲ್ಲಿಸಿ ಯುವ ಪೀಳಿಗೆಯನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಪತ್ರಕರ್ತ ಮೋಹನ್ ಕಾಡ್ಲೂರು ಮಾತನಾಡಿದರು. ಸೇವಾ ಪ್ರತಿನಿಧಿ ಜಯಲಕ್ಷ್ಮೀ, ಒಕ್ಕೂಟದ ಕಾರ್ಯದರ್ಶಿ ಇಂದ್ರಮಣಿ, ಸಂಘದ ಸದಸ್ಯರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net