ಬಾಳಿಗೆ ಬೆಳಕಾದ ಶಿಕ್ಷಕರನ್ನು ಮರೆಯಬೇಡಿ

ಆಲೂರು ತಾಲೂಕಿನ ಪಾಳ್ಯ ಹೋಬಳಿ ಕಾಮತಿ ಕೂಡಿಗೆಯಲ್ಲಿರುವ ಕೆಪಿಎಸ್ ಶಾಲೆಯಲ್ಲಿ 2009ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಹಾಗೂ ಸಹಪಾಠಿ ಸ್ನೇಹಿತರ ಬಳಗದಿಂದ ಹಮ್ಮಿಕೊಂಡಿದ್ದ ಗುರುವಂದನಾ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಆಲೂರು ತಾಲೂಕಿನ ಪಾಳ್ಯ ಹೋಬಳಿ ಕಾಮತಿ ಕೂಡಿಗೆಯಲ್ಲಿರುವ ಕೆಪಿಎಸ್ ಶಾಲೆಯಲ್ಲಿ 2009ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಹಾಗೂ ಸಹಪಾಠಿ ಸ್ನೇಹಿತರ ಬಳಗದಿಂದ ಹಮ್ಮಿಕೊಂಡಿದ್ದ ಗುರುವಂದನಾ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಲಾಯಿತು.
Published on
ಆಲೂರು: ಪಾಠ ಹೇಳಿ, ಜ್ಞಾನಾರ್ಜನೆ ಮಾಡಿಸಿ ಬಾಳಿಗೆ ಬೆಳಕಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯಶಿಕ್ಷಕ ಚಂದ್ರು ಕಿವಿಮಾತು ಹೇಳಿದರು.
ತಾಲೂಕಿನ ಪಾಳ್ಯ ಹೋಬಳಿ ಕಾಮತಿ ಕೂಡಿಗೆಯಲ್ಲಿರುವ ಕೆಪಿಎಸ್ ಶಾಲೆಯಲ್ಲಿ 2009ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಹಾಗೂ ಸಹಪಾಠಿ ಸ್ನೇಹಿತರ ಬಳಗದಿಂದ ಗುರುವಾರ ಹಮ್ಮಿಕೊಂಡಿದ್ದ ಗುರುವಂದನಾ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಗುರುಗಳ ಸೇವೆಯನ್ನು ಸ್ಮರಿಸುವುದು ಮತ್ತು ಅವರಿಗೆ ಪ್ರತ್ಯಕ್ಷವಾಗಿ ಧನ್ಯತೆ ಸಮರ್ಪಣೆ ಮಾಡುವುದು ಸಾರ್ಥಕ ಕಾರ್ಯ. ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಹಿರಿಯ ವಿದ್ಯಾರ್ಥಿಗಳು 17 ವರ್ಷದ ನಂತರ ಒಂದೆಡೆ ಸೇರಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದ ಅವರು, 32 ವರ್ಷಗಳ ಸುದೀರ್ಘ ಸೇವೆ ನೆನೆದು ಭಾವುಕರಾದರು.
ಶಿಕ್ಷಕ ವೃತ್ತಿ ಕೇವಲ ಒಂದು ಕೆಲಸವಲ್ಲ, ಅದೊಂದು ತಪಸ್ಸು. ನನ್ನ ವೃತ್ತಿಜೀವನದಲ್ಲಿ ನಾನು ಗಳಿಸಿದ ಅತಿದೊಡ್ಡ ಆಸ್ತಿ ಎಂದರೆ ನನ್ನ ವಿದ್ಯಾರ್ಥಿಗಳ ಪ್ರೀತಿ ಹಾಗೂ ಅವರಿಂದು ಸಮಾಜದಲ್ಲಿ ಕಂಡುಕೊಂಡಿರುವ ಉನ್ನತ ಸ್ಥಾನ. ನೀವು ತೋರುತ್ತಿರುವ ಈ ಅಭಿಮಾನವೇ ನನ್ನ ಜೀವನದ ಸಾರ್ಥಕತೆ ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಗುರುಗಳಿಗೆ ಬೀಳ್ಕೊಡುಗೆ ನೀಡಿದರು. ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಮಧುರ ನೆನಪುಗಳನ್ನು ವೇದಿಕೆಯ ಮೇಲೆ ಹಂಚಿಕೊಂಡು, ಅಂದು ಗುರುಗಳು ತೋರಿದ ಮಾರ್ಗದರ್ಶನ ಹಾಗೂ ಹಾಕಿಕೊಟ್ಟ ಭದ್ರ ಬುನಾದಿಯನ್ನು ಸ್ಮರಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಎಚ್.ಡಿ.ಮಂಜುನಾಥ್, ಸದಸ್ಯ ಮಂಜುನಾಥ್ ಕಾಮತಿ, ಹಿರಿಯ ವಿದ್ಯಾರ್ಥಿಗಳಾದ ರಾಜಶೇಖರ್, ಧರ್ಮ, ಲೋಕೇಶ್, ಯುವರಾಜ್, ಶಿವರಾಜ್, ರಾಕೇಶ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net