ವಿಶ್ವ ಕಂಡ ಶ್ರೇಷ್ಠ ಸಮಾಜ ಸುಧಾರಕ ಅಂಬೇಡ್ಕರ್

ಆಲೂರು ತಾಲೂಕಿನ ಕಾರ್ಜುವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಶ್ವ ರತ್ನ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ  ಮಾತನಾಡಿದರು. ನಟರಾಜ್ ನಾಕಲಗೂಡು, ಮಲ್ಲಿಕಾರ್ಜುನ,   ಚಂಚಲಾ ಕುಮಾರಸ್ವಾಮಿ, ರವಿ ಕಾರ್ಜುವಳ್ಳಿ, ರವಿ ನಿಲುವಾಗಿಲು ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ಅಭಿಮತ
  • ವಿಶ್ವ ರತ್ನ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಆಲೂರು: ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕಂಡ ಶ್ರೇಷ್ಠ ಸಮಾಜ ಸುಧಾರಕ, ಮಹಾ ಮಾನವತಾವಾದಿ. ಈ ದೇಶದ ಇತಿಹಾಸವನ್ನೇ ಬದಲಾಯಿಸಿದ ಮಹಾತ್ಮರ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದು ಮಾಜಿ ಸಚಿವ ಎಚ್. ಕೆ.ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಪಾಳ್ಯ ಹೋಬಳಿ ಕಾರ್ಜುವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಶ್ವ ರತ್ನ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜ್ ನಾಕಲಗೂಡು, ಕಣತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿದರು.
ಬೆಳಗೋಡು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಚಂಚಲಾ ಕುಮಾರಸ್ವಾಮಿ, ಕಣತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರವಿ ಕಾರ್ಜುವಳ್ಳಿ, ತಾಳೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರವಿ ನಿಲುವಾಗಿಲು, ಕಾರ್ಜುವಳ್ಳಿ ಗ್ರಾಮಸ್ಥರಾದ ಸೋಮಶೇಖರ, ಗುರಪ್ಪ, ಲಿಂಗರಾಜು, ಮುರಳಿ, ಸಿದ್ದಲಿಂಗ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net