ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ

ಬಾಂಬ್ ನಿಷ್ಕ್ರೀಯ ದಳ ಮತ್ತು ಶ್ವಾನದಳ ಸಿಬ್ಬಂದಿ ಕೋರ್ಟ್ ಆವರಣ ಪರಿಶೀಲನೆ ನಡೆಸಿತು.
ಬಾಂಬ್ ನಿಷ್ಕ್ರೀಯ ದಳ ಮತ್ತು ಶ್ವಾನದಳ ಸಿಬ್ಬಂದಿ ಕೋರ್ಟ್ ಆವರಣ ಪರಿಶೀಲನೆ ನಡೆಸಿತು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ
  • ಇ-ಮೇಲೆ ಮೂಲಕ ಸಂದೇಶ ಕಳುಹಿಸಿದ ಆಗುತಂಕರು
  • ಶ್ವಾನದಳದಿಂದ ತಪಾಸಣೆ
ಹಾಸನ: ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಸೋಮವಾರ ಬೆಳಗ್ಗೆ ಅಧಿಕೃತ ಇ-ಮೇಲ್ ವಿಳಾಸಕ್ಕೆ ಅಪರಿಚಿತರಿಂದ ಬೆದರಿಕೆ ಸಂದೇಶ ಬಂದಿರುವ ಮಾಹಿತಿ ತಿಳಿದು ಭದ್ರತಾ ಸಿಬ್ಬಂದಿ ಕಟ್ಟೆಚ್ಚರವಹಿಸಿದ್ದಾರೆ. ನಗರ ಠಾಣೆ ಪೊಲೀಸರು ನ್ಯಾಯಾಲಯ ಆವರಣಕ್ಕೆ ಧಾವಿಸಿ ಪ್ರಾಥಮಿಕ ಪರಿಶೀಲನೆ ನಡೆಸಿದರು. ನಂತರ ಬಾಂಬ್ ನಿಷ್ಕ್ರೀಯ ದಳ ಮತ್ತು ಶ್ವಾನದಳವನ್ನು ಸ್ಥಳಕ್ಕೆ ಕರೆಸಿಕೊಂಡು ಸಂಪೂರ್ಣ ಆವರಣ ತಪಾಸಣೆ ಮಾಡಲಾಯಿತು.
ನ್ಯಾಯಾಲಯದ ಪ್ರವೇಶ ದ್ವಾರ, ಪಾರ್ಕಿಂಗ್ ಪ್ರದೇಶ, ನ್ಯಾಯಾಧೀಶರ ಕಚೇರಿ, ಒಳಭಾಗ, ದಾಖಲೆ ಕೊಠಡಿ ಸೇರಿದಂತೆ ಪ್ರತಿಯೊಂದು ಭಾಗದಲ್ಲೂ ಸೂಕ್ಷ್ಮ ಪರಿಶೀಲನೆ ನಡೆಸಲಾಗಿದೆ.
ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ವಕೀಲರನ್ನು ತಪಾಸಣೆ ಬಳಿಕವೇ ಒಳಗೆ ಬಿಡಲಾಗುತ್ತಿದೆ. ಯಾವುದೇ ಅನುಮಾನಾಸ್ಪದ ವಸ್ತು ಕಂಡು ಬಂದಿಲ್ಲ ಎಂದು ಪ್ರಾಥಮಿಕ ಮಾಹಿತಿ ತಿಳಿಸಿವೆ.
ಬೆದರಿಕೆ ಇ-ಮೇಲ್‌ನ ಮೂಲ ಪತ್ತೆ ಹಚ್ಚಲು ಸೈಬರ್ ವಿಭಾಗದ ಸಹಾಯದಿಂದ ತನಿಖೆ ಆರಂಭಿಸಲಾಗಿದೆ. ಇ-ಮೇಲ್ ಯಾವ ಸ್ಥಳದಿಂದ ಕಳುಹಿಸಲಾಗಿದೆ, ಅದರ ಹಿಂದೆ ಯಾರು ಇದ್ದಾರೆ ಎಂಬುದರ ಕುರಿತು ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.
ಜಿಲ್ಲಾ ನ್ಯಾಯಾಲಯಕ್ಕೆ ಇದು ಎರಡನೇ ಬಾರಿ ಬಾಂಬ್ ಬೆದರಿಕೆ ಇ-ಮೇಲ್ ಬಂದಂತಾಗಿದೆ. ಹಿಂದೆಯೂ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿರಲಿಲ್ಲ. ಆದರೂ ಈ ರೀತಿಯ ಪ್ರಕರಣ ಮರುಕಳಿಸುತ್ತಿರುವುದು ಆತಂಕ ಜತೆಗೆ ಕರ್ತವ್ಯಕ್ಕೆ ಅಡ್ಡಿಯಾಗುತ್ತಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net