ಪೊಲೀಸ್ ಸಿಬ್ಬಂದಿ ಕೊರತೆ ನೀಗಿಸಲು ಸರ್ಕಾರಕ್ಕೆ ಮನವಿ

ಸ್ಥಳೀಯ ಶಾಸಕರ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಂಘದಿಂದ ಹಾಸನ ಜಿಲ್ಲಾ ಪೊಲೀಸ್ ಇಲಾಖೆಗೆ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಬೊಲೆರೋ ವಾಹನವನ್ನು ಹಸ್ತಾಂತರಿಸಿದರು. ಡಾ.ಜಿ.ಎನ್.ಬಸವರಾಜು, ಡಾ.ರಾಜಶೇಖರ್, ಡಾ.ಭಾರತಿ ರಾಜಶೇಖರ್, ಎಎಸ್ಪಿ ಶ್ರೀನಿಧಿ,  ಕೃಷ್ಣೇಗೌಡ ಇತರರಿದ್ದರು.
ಸ್ಥಳೀಯ ಶಾಸಕರ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಂಘದಿಂದ ಹಾಸನ ಜಿಲ್ಲಾ ಪೊಲೀಸ್ ಇಲಾಖೆಗೆ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಬೊಲೆರೋ ವಾಹನವನ್ನು ಹಸ್ತಾಂತರಿಸಿದರು. ಡಾ.ಜಿ.ಎನ್.ಬಸವರಾಜು, ಡಾ.ರಾಜಶೇಖರ್, ಡಾ.ಭಾರತಿ ರಾಜಶೇಖರ್, ಎಎಸ್ಪಿ ಶ್ರೀನಿಧಿ, ಕೃಷ್ಣೇಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪೊಲೀಸ್ ಸಿಬ್ಬಂದಿ ಕೊರತೆ ನೀಗಿಸಲು ಸರ್ಕಾರಕ್ಕೆ ಮನವಿ
  • ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಹೇಳಿಕೆ
ಹಾಸನ: ಸ್ಥಳೀಯ ಶಾಸಕರ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಂಘದಿಂದ ಜಿಲ್ಲಾ ಪೊಲೀಸ್ ಇಲಾಖೆಗೆ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಬೊಲೆರೋ ವಾಹನವನ್ನು ಶನಿವಾರ ಹಸ್ತಾಂತರಿಸಿದರು.
ಸ್ವರೂಪ್ ಪ್ರಕಾಶ್ ಜತೆ ಎಸ್ಪಿ ಶುಭಾನ್ವಿತಾ ಹಸಿರು ನಿಶಾನೆ ತೋರುವ ಮೂಲಕ ವಾಹನಕ್ಕೆ ಚಾಲನೆ ನೀಡಿದರು.
ಹಾಸನ ಜಿಲ್ಲಾ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಸಿಬ್ಬಂದಿ ಕೊರತೆ ಹಾಗೂ ಮೂಲ ಸೌಕರ್ಯಗಳ ಕೊರತೆಯಿಂದ ಒಂದಷ್ಟು ಸಮಸ್ಯೆಗಳಾಗುತ್ತಿವೆ. ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದೇನೆ ಎಂದು ಸ್ವರೂಪ್ ಪ್ರಕಾಶ್ ಹೇಳಿದರು.
ಪೊಲೀಸ್ ಇಲಾಖೆಯಲ್ಲಿ ವಾಹನಗಳ ಕೊರತೆ ಇರುವುದು ತನ್ನ ಗಮನಕ್ಕೆ ಬಂದ ನಂತರ ಖಾಸಗಿ ಆಸ್ಪತ್ರೆ ಮಾಲೀಕರ ಸಂಘದ ಸಹಯೋಗದಲ್ಲಿ ಒಂದು ಬೊಲೆರೋ ವಾಹನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಮೂರು ವಾಹನಗಳನ್ನು ನೀಡಲು ಯೋಚಿಸಲಾಗಿದೆ ಎಂದರು.
ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಒಂದು ಹೆಚ್ಚುವರಿ ಪೊಲೀಸ್ ಠಾಣೆ ಹಾಗೂ ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಆಗುವುದಿಲ್ಲ ಎಂಬ ಉತ್ತರ ನೀಡುವ ಮೂಲಕ ರಾಜ್ಯ ಸರ್ಕಾರ ಹಾಸನವನ್ನು ಎಲ್ಲ ರೀತಿಯಲ್ಲೂ ಸಂಪೂರ್ಣವಾಗಿ ಕಡೆಗಣಿಸಿದೆ. ಅಲ್ಲದೆ ಶಾಸಕರಿಗೆ ಬರುವ ಅನುದಾನವನ್ನೂ ಕಡಿತಗೊಳಿಸಲಾಗಿದೆ. ಮುಂದಿನ ದಿನಗಳಲ್ಲಾದರೂ ಹೆಚ್ಚಿನ ಅನುದಾನ ಹಾಗೂ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿ ಪೊಲೀಸ್ ಇಲಾಖೆಗೆ ಶಕ್ತಿ ತುಂಬುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.
ಹಾಸನ ನಗರ ಭಾಗದಲ್ಲಿ ಪ್ರತಿದಿನ 12 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರ ಮಾಡುತ್ತವೆ. ಅದಕ್ಕನುಗುಣವಾಗಿ ಪೊಲೀಸ್ ಇಲಾಖೆಗೆ ಸಿಬ್ಬಂದಿ ನೇಮಕವಾಗಬೇಕು. ಇದಲ್ಲದೆ ನಗರಸಭೆ, ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ್ದು, ಅದಕ್ಕೂ ಮುಂದಿನ ಮೂರು ವರ್ಷಗಳ ಕಾಲ ಅನುದಾನ ನೀಡಲು ಆಗುವುದಿಲ್ಲ ಎಂಬ ಲಿಖಿತ ಉತ್ತರ ನೀಡಿದ್ದಾರೆ. ಇದು ಬೇಸರ ತಂದಿದೆ ಎಂದರು.
ಗ್ಯಾರಂಟಿ ಯೋಜನೆಗಳಿಂದಾಗಿ ಅನುದಾನವಿಲ್ಲದೆ ಶಾಸಕರು ಕಂಗಾಲಾಗಿದ್ದಾರೆ. ಆಡಳಿತರೂಢ ಕಾಂಗ್ರೆಸ್ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳನ್ನು ಗುರಿಯಾಗಿಟ್ಟುಕೊಂಡು ಬೇರೆ ಅಭಿವೃದ್ಧಿ ಮಾಡದೆ ನಿರ್ಲಕ್ಷೃ ತೋರಿದೆ, ಮುಂದಿನ ಬಜೆಟ್ ಅಧಿವೇಶನದಲ್ಲಾದರೂ ಹಾಸನಕ್ಕೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಸಹಕಾರ ನೀಡಲಿ ಎಂದು ಮನವಿ ಮಾಡಿದರು.
ಡಾ.ಜಿ.ಎನ್.ಬಸವರಾಜು, ಡಾ.ರಾಜಶೇಖರ್, ಡಾ.ಭಾರತಿ ರಾಜಶೇಖರ್, ಎಎಸ್ಪಿ ಶ್ರೀನಿಧಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net