ಅರಸೀಕೆರೆಯಲ್ಲಿ ಅರಸೀ ಉತ್ಸವ ಸಂಕಲ್ಪ

 ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ದೇವಸ್ಥಾನದ ಆವರಣದಲ್ಲಿ ಶಾಸಕ ಶಿವಲಿಂಗೇಗೌಡ ದಾಸೋಹ ಕಟ್ಟಡ ಉದ್ಘಾಟಿಸಿದರು. ನಗರ ಪ್ರಾಧಿಕಾರ ಅಧ್ಯಕ್ಷ ಅರುಣ್‌ಕುಮಾರ್, ದೇವಸ್ಥಾನ ಅಭಿವೃದ್ಧಿ ಸಮಿತಿ ಸಂಚಾಲಕ ಟಿ.ಆರ್.ನಾಗರಾಜ್, ಹೇಮಂತ್, ಚಂದ್ರಪ್ಪ ಇತರರು ಇದ್ದರು.
ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ದೇವಸ್ಥಾನದ ಆವರಣದಲ್ಲಿ ಶಾಸಕ ಶಿವಲಿಂಗೇಗೌಡ ದಾಸೋಹ ಕಟ್ಟಡ ಉದ್ಘಾಟಿಸಿದರು. ನಗರ ಪ್ರಾಧಿಕಾರ ಅಧ್ಯಕ್ಷ ಅರುಣ್‌ಕುಮಾರ್, ದೇವಸ್ಥಾನ ಅಭಿವೃದ್ಧಿ ಸಮಿತಿ ಸಂಚಾಲಕ ಟಿ.ಆರ್.ನಾಗರಾಜ್, ಹೇಮಂತ್, ಚಂದ್ರಪ್ಪ ಇತರರು ಇದ್ದರು.
Published on
ಅರಸೀಕೆರೆ ಗ್ರಾಮಾಂತರ: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅರಸೀಕೆರೆಯಲ್ಲಿ ಅರಸೀ ಹಬ್ಬ ಅಥವಾ ಅರಸೀ ಉತ್ಸವ ಆಚರಿಸಲು ಸಂಕಲ್ಪ ಮಾಡಿರುವುದಾಗಿ ಗೃಹ ಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.
ಮಾಲೆಕಲ್ ತಿರುಪತಿಯ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನೂತನ ದಾಸೋಹ ಭವನ ಉದ್ಘಾಟಿಸಿ ಮಾತನಾಡಿ, ಮುಂದಿನ ಮೂರು ತಿಂಗಳೊಳಗೆ ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಅರಸೀ ಉತ್ಸವವನ್ನು ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಆಯೋಜಿಸಲಾಗುವುದು ಎಂದರು.
ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಪ್ರತಿ ಶನಿವಾರ, ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳಲ್ಲಿ ಅನ್ನದಾಸೋಹ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ತಾಲೂಕು ಆಡಳಿತ, ಅಭಿವೃದ್ಧಿ ಸಮಿತಿ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ರಾಜ್ಯದ ತಿರುಪತಿ ಎಂದೇ ಪ್ರಸಿದ್ಧಿಯಾಗಿರುವ ಮಾಲೆಕಲ್ ತಿರುಪತಿಯ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿರುವುದು ಸಂತಸದ ವಿಷಯ ಎಂದರು.
ಈ ಪವಿತ್ರ ಕ್ಷೇತ್ರವನ್ನು ಸುಂದರ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವುದು ಪ್ರಾಮಾಣಿಕ ಪ್ರಯತ್ನವಾಗಿದ್ದು, ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇಗುಲದ ರಾಜಗೋಪುರದ ಕಾಮಗಾರಿ ಪೂರ್ಣಗೊಂಡಿದೆ. ಇನ್ನೊಂದು ತಿಂಗಳೊಳಗೆ ರಾಜಗೋಪುರವನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು.
ಅರಸೀಕೆರೆ ಕ್ಷೇತ್ರವು ದೇವತೆಗಳ ನಾಡಾಗಿದ್ದು, ಸುತ್ತಮುತ್ತಲಿನ ಅನೇಕ ದೇವಾಲಯಗಳು ಈ ಭಾಗದ ಧಾರ್ಮಿಕ ವೈಭವ ಹೆಚ್ಚಿಸಿವೆ. ಈ ಇತಿಹಾಸ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.
ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳು, ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮಸ್ಥರು ಹಾಗೂ ಸಾವಿರಾರು ಭಕ್ತರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net