ಪ್ರತಿಭಟನಾ ಮೆರವಣಿಗೆಗೆ ಸೀಮಿತವಾದ ಮುಷ್ಕರ

ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿರ ಫೆಡರೇಷನ್ ಪದಾಧಿಕಾರಿಗಳು ನಗರದ ಪ್ರವಾಸಿ ಮಂದಿರದ ಆವರಣದಿಂದ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿರ ಫೆಡರೇಷನ್ ಪದಾಧಿಕಾರಿಗಳು ನಗರದ ಪ್ರವಾಸಿ ಮಂದಿರದ ಆವರಣದಿಂದ ಪ್ರತಿಭಟನೆ ಮೆರವಣಿಗೆ ನಡೆಸಿದರು.
Published on
ಅರಸೀಕೆರೆ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಸಾರ್ವತ್ರಿಕ ಮುಷ್ಕರ ಪ್ರತಿಭಟನಾ ಮೆರವಣಿಗೆಗೆ ಸೀಮಿತವಾಗಿತ್ತು.
ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿರ ಫೆಡರೇಷನ್ ಪದಾಧಿಕಾರಿಗಳು ನಗರದ ಪ್ರವಾಸಿ ಮಂದಿರದ ಆವರಣದಿಂದ ಬ್ಯಾನರ್, ಬಂಟಿಂಗ್ ಹಿಡಿದು ಘೋಷಣೆ ಕೂಗುತ್ತಾ ತಾಲೂಕು ಕಚೇರಿಗೆ ತೆರಳಿ ಗ್ರೇಡ್-2 ತಹಸೀಲ್ದಾರ್ ಪಾಲಾಕ್ಷ ಅವರಿಗೆ ಮನವಿ ಸಲ್ಲಿಸಿದರು.
ಎಐಟಿಯುಸಿ ಸಂಘಟನೆ ಅಧ್ಯಕ್ಷೆ ನಾಗರತ್ನಮ್ಮ ಮಾತನಾಡಿ,
ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿರ ಕನಿಷ್ಟ ವೇತನ ಹೆಚ್ಚಳ ಮಾಡಬೇಕು. ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ಸವಲತ್ತುಗಳನ್ನು ಒದಗಿಸುವ ಕಾನೂನು ಜಾರಿಗೆ ತರಬೇಕು. ಕಾರ್ಪೊರೇಟ್ ಸಂಸ್ಕೃತಿಗೆ ಆಸ್ಪದ ನೀಡಬಾರದು ಎನ್ನುವ ಅಂಶ ಸೇರಿದಂತೆ ಹತ್ತು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದೇವೆ. ನ್ಯಾಯ ದೊರೆಯದಿದ್ದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಸಿದರು.
ಬಳಿಕ ಸಿಡಿಪಿಒ ಕಚೇರಿಗೆ ತೆರಳಿ ಪ್ರಭಾರ ಅಧಿಕಾರಿ ಯೋಗೀಶ್ ಅವರಿಗೂ ಮನವಿ ಸಲ್ಲಿಸಿದರು. ಸಂಘಟನೆಯ ಪ್ರಧಾನ ಕಾರ್ಯದರ್ಶಿ ರತ್ನಮ್ಮ, ಖಜಾಂಚಿ ಗಾಯತ್ರಿ, ಷಡಕ್ಷರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net