ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ

ಹಿರೀಸಾವೆ  ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಪಾಠಶಾಲೆ ಆವರಣದಲ್ಲಿ ಎವನ್ ಪ್ಲಾಸ್ಟ್ ಪೈಪ್ ಕಂಪನಿಯಿಂದ ಆಯೋಜಿಸಿದ್ದ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಸಿಎನ್ ಬಾಲಕೃಷ್ಣ ಚಾಲನೆ ನೀಡಿದರು.
ಹಿರೀಸಾವೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಪಾಠಶಾಲೆ ಆವರಣದಲ್ಲಿ ಎವನ್ ಪ್ಲಾಸ್ಟ್ ಪೈಪ್ ಕಂಪನಿಯಿಂದ ಆಯೋಜಿಸಿದ್ದ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಸಿಎನ್ ಬಾಲಕೃಷ್ಣ ಚಾಲನೆ ನೀಡಿದರು.
Published on
ಹಿರೀಸಾವೆ: ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಪ್ರೌಢಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಎಒನ್ ಪ್ಲಾಸ್ಟ್ ಪೈಪ್ ಕಂಪನಿ ವತಿಯಿಂದ ಆಯೋಜಿಸಿದ್ದ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಉಳ್ಳವರು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ ಎಂದರು.
ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ 6000 ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಲಿದ್ದು ಮುಂದಿನ ವರ್ಷದಿಂದ 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಲು ವ್ಯವಸ್ಥೆ ರೂಪಿಸಲಾಗುವುದು ಎಂದು ತಿಳಿಸಿದರು.
ಸರ್ಕಾರವು ಶೈಕ್ಷಣಿಕ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸುವ ಹಾಗೂ ಬಡ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಚಿತವಾಗಿ ಸಮವಸ್ತ್ರ, ಪುಸ್ತಕ, ಕ್ಷೀರಭಾಗ್ಯ ಸೇರಿದಂತೆ ವಿವಿಧ ಸೌಲಭ್ಯಗಳೊಂದಿಗೆ ಉಚಿತ ಶಿಕ್ಷಣ ನೀಡುತ್ತಿದೆ. ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ನೀತಿ ಪಾಠದ ಬೋಧನೆ ಅಗತ್ಯವಿದ್ದು ದಿನದ 15 ನಿಮಿಷಗಳ ಕಾಲ ಮೀಸಲಿಟ್ಟು ನೀತಿ ಪಾಠ ಬೋಧನೆ ಮಾಡುವಲ್ಲಿ ಶಿಕ್ಷಕರು ಮುಂದಾಗಬೇಕು. ಇದರಿಂದ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಲಿದೆ ಎಂದರು.
ಶಾಸಕರು ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿದರು. ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಚ್.ಜಿ.ರಾಮಕೃಷ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪರಮೇಶ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಜೆ.ಮಹೇಶ್, ನಿರ್ದೇಶಕ ಬಾಬು, ಎಸ್ಡಿಎಂಸಿ ಅಧ್ಯಕ್ಷ ರಘು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net