ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಬೆಂಗಳೂರು ವಿಜಯನಗರದ ಶ್ರೀ ತ್ರಿಲೋಕಾದೀಶ ಸ್ವಾಮೀಜಿ, ಬೆಂಗಳೂರು ಹಂಪಿ ನಗರ ಪತಂಜಲಿ ಯೋಗಾಶ್ರಮದ ಶ್ರೀ ಪ್ರಕಾಶ್ ಯೋಗಿ ಗುರೂಜಿ, ದೊಡ್ಡಸಾಗರ ರಾಮಕೃಷ್ಣ ಆಶ್ರಮದ ಸ್ವಾಮಿ ಮೇದಾನಂದ ಸ್ವಾಮೀಜಿ, ನೆಲಮಂಗಲ ಶಿವಾನಂದ ಆಶ್ರಮದ ಶ್ರೀ ರಮಾನಂದ ಸ್ವಾಮೀಜಿ, ಕೆಂಬಾಳು ಮಠದ ಶ್ರೀ ಹಿರಿಯಣ್ಣ ಸ್ವಾಮೀಜಿ, ಶ್ರೀ ಸಾಯಿಶ್ರೀ ಕೀರ್ತಿನಾಥ ಸ್ವಾಮೀಜಿ, ವಿವಿಧ ಮಠಗಳ ಮಠಾಧೀಶರು ಸಾನ್ನಿಧ್ಯ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ್‌ಗೌಡ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜೆ.ಆರ್.ಕೆಂಚೇಗೌಡ, ಜನಪ್ರತಿನಿಧಿಗಳು ಹಾಗೂ ಸಮಾಜ ಮುಖಂಡರು ಭಾಗವಹಿಸಿದ್ದರು.