ಬ್ಯಾಂಕ್‌ಗೆ 49.42 ಲಕ್ಷ ರೂ. ನಿವ್ವಳ ಲಾಭ

ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಗಣ್ಯರು ಉದ್ಘಾಟಿಸಿದರು.ಮೊಗಪ್ಪಗೌಡ, ಹಿರಿಯಣ್ಣಗೌಡ, ವಸಂತಕುಮಾರ್, ಶಿವಶಂಕರ್ ಇತರರಿದ್ದರು.
ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಗಣ್ಯರು ಉದ್ಘಾಟಿಸಿದರು.ಮೊಗಪ್ಪಗೌಡ, ಹಿರಿಯಣ್ಣಗೌಡ, ವಸಂತಕುಮಾರ್, ಶಿವಶಂಕರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬೇಲೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಂ.ಡಿ. ದಿನೇಶ್ ಮಾಹಿತಿ
  • ಸರ್ವ ಸದಸ್ಯರ ವಾರ್ಷಿಕ ಮಹಾಸಭೆ
ಬೇಲೂರು: ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 2025-26ನೇ ಸಾಲಿನಲ್ಲಿ 49.42 ಲಕ್ಷ ರೂ., ನಿವ್ವಳ ಲಾಭ ಗಳಿಸಿದ್ದು, ಸಾಲ ವಸೂಲಾತಿಯಲ್ಲೂ ಉತ್ತಮ ಸಾಧನೆ ಮಾಡಿದೆ. ಈ ಸಾಧನೆಗೆ ರೈತರು, ನಿರ್ದೇಶಕರು ಹಾಗೂ ಬ್ಯಾಂಕ್ ಸಿಬ್ಬಂದಿ ಸಹಕಾ ಕಾರಣ ಎಂದು ಬೇಲೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಂ.ಡಿ. ದಿನೇಶ್ ಹೇಳಿದರು.
ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರು ಬ್ಯಾಂಕ್‌ನಿಂದ ಪಡೆದ ಸಾಲವನ್ನು ನಿಗದಿತ ಅವಧಿಯೊಳಗೆ ಮರು ಪಾವತಿ ಮಾಡಿದರೆ ಮಾತ್ರ ಬ್ಯಾಂಕ್‌ನ ಆರ್ಥಿಕ ಸ್ಥಿತಿ ಸದೃಢಗೊಂಡು, ಇತರೆ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲು ಸಾಧ್ಯ ಎಂದರು.
ಸರ್ಕಾರ ರೈತರು, ಮಹಿಳೆಯರು ಹಾಗೂ ಸಾರ್ವಜನಿಕರ ಅಭಿವೃದ್ಧಿಗಾಗಿ ಕೆಲ ಯೋಜನೆಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತಿದೆ. ಈ ಯೋಜನೆಗಳ ಯಶಸ್ಸಿಗೆ ಫಲಾನುಭವಿಗಳು ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುವುದು ಅತ್ಯಗತ್ಯ. ಅಲ್ಲದೆ 1953ರಿಂದ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ರೈತರ ಕೃಷಿ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಸಾಲ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಜಿಲ್ಲೆಯಲ್ಲಿಯೇ ಮಾದರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.
ಬ್ಯಾಂಕ್‌ನ ಉತ್ತಮ ಕಾರ್ಯನಿರ್ವಹಣೆ ಪರಿಗಣಿಸಿ ರಾಜ್ಯ ಮಟ್ಟದಲ್ಲಿ ಮೊದಲ ಬಾರಿಗೆ 7 ಕೋಟಿ ರೂ., ಹೆಚ್ಚುವರಿ ಸಾಲ ಮಂಜೂರಾಗಿದ್ದು ಬ್ಯಾಂಕ್‌ಗೆ ಸಂದ ಗೌರವವಾಗಿದೆ. ಬ್ಯಾಂಕ್‌ಗೆ ಸಂಬಂಧಿಸಿದ ನಿವೇಶನದ ವಿವಾದ ನ್ಯಾಯಾಲಯದಲ್ಲಿದ್ದು, ಪರ್ಯಾಯ ಜಾಗ ಗುರುತಿಸಿ ಶಾಶ್ವತ ನಿವೇಶನ ಕಲ್ಪಿಸಲು ಪ್ರಯತ್ನಗಳು ನಡೆಯುತ್ತಿವೆ. ಮುಂದಿನ ಸಾಮಾನ್ಯ ಸಭೆಯೊಳಗೆ ಈ ಕುರಿತು ಸಿಹಿ ಸುದ್ದಿ ನೀಡಲಾಗುವುದು. ಬ್ಯಾಂಕ್‌ನ ಯಾವುದೇ ನಿರ್ದೇಶಕರು ಅಥವಾ ಸದಸ್ಯರು ಸಾಲ ಮರುಪಾವತಿಯಿಂದ ವಿನಾಯಿತಿ ಪಡೆದಿಲ್ಲ. ಬಾಕಿ ಉಳಿಸಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಚುನಾವಣೆಗೆ ಸಂಬಂದ ಅರ್ಹತೆ ಹಾಗೂ ಅನರ್ಹತೆ ಕುರಿತು ಅಂತಿಮ ನಿರ್ಧಾರ ಚುನಾವಣಾಧಿಕಾರಿ ಮತ್ತು ನ್ಯಾಯಾಲಯದ ವ್ಯಾಪ್ತಿಗೆ ಸೇರಿದೆ. ಚುನಾವಣೆ ನಡೆಸಲು ಬ್ಯಾಂಕ್‌ಗೆ 10 ರಿಂದ 12 ಲಕ್ಷ ವೆಚ್ಚವಾಗುವುದರಿಂದ ಸದಸ್ಯರು ಒಮ್ಮತದ ನಿರ್ಧಾರ ಕೈಗೊಂಡು ಬ್ಯಾಂಕ್‌ನ ಹಿತ ಕಾಪಾಡಬೇಕು. ಸಾಲ ವಸೂಲಾತಿಯಲ್ಲೂ ಉತ್ತಮ ಸಾಧನೆ ಮಾಡಿದ್ದು, ಮುಂದೆಯೂ ಇದು ಮುಂದುವರಿಸಲು ಎಲ್ಲರ ಸಹಕಾರ ಮುಖ್ಯ ಎಂದರು.
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ರಾಜಶೇಖರ್ ಮಾತನಾಡಿ, ಸದಸ್ಯರು ಒಗ್ಗಟ್ಟಿನಿಂದ ಸಹಕಾರ ನೀಡಿ ಬ್ಯಾಂಕ್‌ನ ಅಭಿವೃದ್ಧಿಗೆ ಕೈಜೋಡಿಸಬೇಕು. ಸಾಲವನ್ನು ಜವಾಬ್ದಾರಿಯಿಂದ ಬಳಸಿ ನಿಗದಿತ ಸಮಯಕ್ಕೆ ಮರುಪಾವತಿ ಮಾಡುವ ಮೂಲಕ ಬ್ಯಾಂಕ್‌ನ ಆರ್ಥಿಕ ಸದೃಢತೆಗೆ ಎಲ್ಲರೂ ಕೈಜೋಡಿಸಬೇಕು.
ಇದೆ ಸಂದರ್ಭ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ನ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನಿಸಲಾಯಿತು.
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾದ ಮೊಗಪ್ಪಗೌಡ, ಹಿರಿಯಣ್ಣಗೌಡ, ವಸಂತಕುಮಾರ್, ಶಿವಶಂಕರ್, ಶ್ರೀನಿವಾಸ್, ರಮೇಶ್, ರಾಜಶೇಖರ್, ಜಯಶಂಕರ್, ಗಂಗಮ್ಮ, ಕಾತ್ಯಾಯಿನಿ,ನಿಂಗರಾಜು ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net