ಕಟೌಟ್, ಬ್ಯಾನರ್ ಹಾಕದಂತೆ ಎಚ್ಚರವಹಿಸಿ

ಹೊಳೆನರಸೀಪುರತಾಲೂಕು ಕಚೇರಿಯಲ್ಲಿ ಮಳಲಿ ಶ್ರೀ ಲಕ್ಷ್ಮೀದೇವಿ ಜಾತ್ರೋತ್ಸವದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಶಾಸಕ ಎಚ್.ಡಿ.ರೇವಣ್ಣ, ತಹಸೀಲ್ದಾರ್ ವೈ.ಎಂ.ರೇಣುಕುಮಾರ್, ಮುಜರಾಯಿ ಇಲಾಖೆ ಸಿಬ್ಬಂದಿ ಇದ್ದರು.
ಹೊಳೆನರಸೀಪುರತಾಲೂಕು ಕಚೇರಿಯಲ್ಲಿ ಮಳಲಿ ಶ್ರೀ ಲಕ್ಷ್ಮೀದೇವಿ ಜಾತ್ರೋತ್ಸವದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಶಾಸಕ ಎಚ್.ಡಿ.ರೇವಣ್ಣ, ತಹಸೀಲ್ದಾರ್ ವೈ.ಎಂ.ರೇಣುಕುಮಾರ್, ಮುಜರಾಯಿ ಇಲಾಖೆ ಸಿಬ್ಬಂದಿ ಇದ್ದರು.
Published on
ಹೊಳೆನರಸೀಪುರ: ತಾಲೂಕಿನ ಹಳೆಕೋಟೆ ಹೋಬಳಿ ಮಳಲಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರೋತ್ಸವ ಮೇ 29 ರಿಂದ 30ರವರೆಗೆ ಜರುಗಲಿದ್ದು ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ದೇವಸ್ಥಾನದ ಸುತ್ತ ಸ್ವಚ್ಛತೆ, ನೀರಿನ ವ್ಯವಸ್ಥೆ, ಚರಂಡಿ ಸ್ವಚ್ಛತೆ, ವಿದ್ಯುತ್ ಸೌಲಭ್ಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಲು ಮಳಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮುಂದಾಗಬೇಕು ಎಂದು ನಿರ್ದೇಶನ ನೀಡಿದರು.
ಜಾತ್ರೋತ್ಸವ ವೇಳೆ ರಾಜಕೀಯ ವ್ಯಕ್ತಿಯ ಹೆಸರಾಗಲಿ, ಪ್ರಚೋದನೆ ನೀಡುವ ಯಾವುದೇ ಕಟೌಟ್ ಹಾಗೂ ಬ್ಯಾನರ್‌ಗಳನ್ನು ಹಾಕಬಾರದು. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳು, ಗ್ರಾಮಸ್ಥರು ಎಚ್ಚರಿಕೆ ವಹಿಸಬೇಕು. ದೇವಸ್ಥಾನಕ್ಕೆ ಭಕ್ತರು ಕೊಡುಗೆ ನೀಡುವ ಆಭರಣಗಳನ್ನು ಅರ್ಚಕರು ದಾಸ್ತಾನುವಹಿಯಲ್ಲಿ ದಾಖಲಿಸಿ ಮುಜರಾಯಿ ಅಧಿಕಾರಿಗಳಿಗೆ ನೀಡಬೇಕು. ಜಾತ್ರೋತ್ಸವದ ಹೆಸರಿನಲ್ಲಿ ಅನಧಿಕೃತವಾಗಿ ಆಹ್ವಾನ ಪತ್ರಿಕೆ ಮುದ್ರಿಸಿ ಹಣ ವಸೂಲಿ ಮಾಡದಂತೆ ಎಚ್ಚರವಹಿಸಿ ಎಂದರು.
ದೇವಸ್ಥಾನದ ಬಳಿ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆಯಬೇಕು. ಯಾವುದೇ ಅಹಿತಕರ ಘಟನೆಗಳು ನಡೆದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಬೇಕು. ಕಲಸೋತ್ಸವ ಕಾರ್ಯ ನಿರ್ವಹಿಸಲು ನೇಮಕಗೊಂಡಿರುವ 15 ಜನ ಅರ್ಚಕರು ಮಹೋತ್ಸವ ನಡೆಸಬೇಕು. ನಿರಂತರವಾಗಿ ವಿದ್ಯುತ್ ಒದಗಿಸುವಂತೆ ಸೆಸ್ಕ್ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂದರು.
ಸಭೆಯಲ್ಲಿ ತಹಸೀಲ್ದಾರ್ ವೈ.ಎಂ.ರೇಣು ಕುಮಾರ್, ಮಳಲಿ ಗ್ರಾಮಸ್ಥರು, ಮುಜರಾಯಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net