ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ

ರಾಷ್ಟ್ರೀಯ ಆಯುಷ್ ಅಭಿಯಾನದಡಿ ಆಯೋಜಿಸಿದ್ದ ವಿಶೇಷ ಆರೋಗ್ಯ ಚಿಕಿತ್ಸಾ ಶಿಬಿರವನ್ನು ಶಾಸಕ ಎಚ್.ಕೆ.ಸುರೇಶ್ ಉದ್ಘಾಟಿಸಿದರು. ಡಾ.ವಿಜಯ್, ಡಾ.ಸತೀಶ್, ಡಾ.ಗುರುಮೂರ್ತಿ, ಡಾ.ಅನುರಾಧಾ ಇತರರು ಇದ್ದರು.
ರಾಷ್ಟ್ರೀಯ ಆಯುಷ್ ಅಭಿಯಾನದಡಿ ಆಯೋಜಿಸಿದ್ದ ವಿಶೇಷ ಆರೋಗ್ಯ ಚಿಕಿತ್ಸಾ ಶಿಬಿರವನ್ನು ಶಾಸಕ ಎಚ್.ಕೆ.ಸುರೇಶ್ ಉದ್ಘಾಟಿಸಿದರು. ಡಾ.ವಿಜಯ್, ಡಾ.ಸತೀಶ್, ಡಾ.ಗುರುಮೂರ್ತಿ, ಡಾ.ಅನುರಾಧಾ ಇತರರು ಇದ್ದರು.
Published on
ಬೇಲೂರು: ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ ಚಿಕಿತ್ಸೆ ನೀಡಿದರೆ ಶೇ.80ರಷ್ಟು ಗುಣವಾದಂತೆ. ಇದನ್ನು ಅರಿತು ವೈದ್ಯರು ಕೆಲಸ ಮಾಡಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ 2027-27ನೇ ಸಾಲಿನ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಸೋಮವಾರ ವಿವಿಧ ವೃತ್ತಿಪರ ನಗರವಾಸಿಗಳಿಗೆ ಆಯೋಜಿಸಿದ್ದ ವಿಶೇಷ ಆರೋಗ್ಯ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಆಯುಷ್ ಇಲಾಖೆಯಿಂದ ರಾಜ್ಯದಾದ್ಯಂತ ಶಿಬಿರಗಳನ್ನು ಆಯೋಜಿಸಿ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಮುಂದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಆಸ್ಪತ್ರೆಗೆ ಬರುವ ವೃದ್ಧರು, ಮಹಿಳೆಯರು, ಮಕ್ಕಳನ್ನು ಉತ್ತಮವಾಗಿ ಮಾತನಾಡಿಸಿ ಚಿಕಿತ್ಸೆ ನೀಡಿದರೆ ರೋಗವೂ ಬೇಗ ಗುಣವಾಗುತ್ತದೆ. ವೈದ್ಯರು ಸರ್ಕಾರಿ ಸಂಬಳಕ್ಕಾಗಿ ಬಂದು ಹೋಗುವುದು ಮಾಡಿದರೆ ಈ ಹುದ್ದೆಗೆ ಗೌರವ ಬರುವುದಿಲ್ಲ ಎಂದರು.
ಆರೋಗ್ಯವೇ ಭಾಗ್ಯ ಎಂಬುದನ್ನು ಅರಿತು ಎಲ್ಲ ವೈದ್ಯರು, ಸಿಬ್ಬಂದಿ ಕೆಲಸ ಮಾಡಬೇಕು. ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರವಿತ್ತು. ಅದನ್ನು ತೆರವು ಮಾಡಿದ್ದು ಸರಿಯಲ್ಲ. ಇದರಿಂದ ಬಡವರಿಗೆ ಅನನುಕೂಲವಾಗುತ್ತಿದೆ. ಮುಂದಿನ ದಿನಗಳಲ್ಲಿ ಆ ಜನೌಷಧ ಕೇಂದ್ರವನ್ನು ಮತ್ತೆ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸತೀಶ್, ವೈದ್ಯರಾದ ಡಾ.ಗುರುಮೂರ್ತಿ, ಡಾ.ಅನುರಾಧಾ, ಆರೋಗ್ಯಾಧಿಕಾರಿ ಲೋಹಿತ್, ಮಹಿಳಾ ಮತ್ತು ಮಕ್ಕಳು ಕಲ್ಯಾಣ ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net