ಬಾಬೂಜಿ ತತ್ವ-ಆದರ್ಶಗಳು ಮುಂದಿನ ಪೀಳಿಗೆಗೂ ತಲುಪಲಿ

ಡಾ.ಬಾಬು ಜಗಜೀವನರಾಮ್ ಜಯಂತಿ ಅಂಗವಾಗಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಚ್.ಕೆ.ಸುರೇಶ್ ಮಾತನಾಡಿದರು. ತಹಸೀಲ್ದಾರ್ ಶ್ರೀಧರ್ ಕಂಕನವಾಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜು, ಕರವೇ ಅಧ್ಯಕ್ಷ ಚಂದ್ರಶೇಖರ್ ಮತ್ತಿತರಿದ್ದರು.

Published on
ಬೇಲೂರು: ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರ ತತ್ವ-ಆದರ್ಶಗಳು ಮತ್ತು ಸಂದೇಶವನ್ನು ಇಂದಿನ ಯುವ ಜನತೆಗೆ ತಲುಪಿಸುವ ಕೆಲಸವಾಗಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.
ಡಾ.ಬಾಬು ಜಗಜೀವನರಾಮ್ ಜಯಂತಿ ಅಂಗವಾಗಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ಉಪ ಪ್ರಧಾನಿಯಾಗಿ ಡಾ.ಜಗಜೀವನರಾಮ್ ಅವರು ಉತ್ತಮ ಕೆಲಸಗಳನ್ನು ಮಾಡಿ ತೋರಿಸಿದ್ದಾರೆ. ಅವರನ್ನು ಹಸಿರು ಕ್ರಾಂತಿಯ ಹರಿಕಾರರೆಂದು ಕರೆಯುತ್ತಾರೆ. ಆದ್ದರಿಂದ ಅವರ ಜಯಂತಿಯನ್ನು ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರಪತ್ರಗಳನ್ನು ಹಂಚಿ, ವಿವಿಧ ಸಮಾಜದ ಮುಖಂಡರು ಮತ್ತು ಸಾರ್ವಜನಿಕರನ್ನು ಒಗ್ಗೂಡಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸೋಣ. ಜತೆಗೆ ಸಮಾಜದ ಹಿರಿಯರು, ಮುಖಂಡರೊಂದಿಗೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿ ಜಯಂತಿಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ತಹಸೀಲ್ದಾರ್ ಶ್ರೀಧರ್ ಕಂಕನವಾಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜು, ಕರವೇ ಅಧ್ಯಕ್ಷ ಚಂದ್ರಶೇಖರ್, ಚಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ರಮೇಶ್, ಎಂ.ಜಿ.ನಿಂಗರಾಜ್, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಮಾಜದ ಮುಖಂಡರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net