ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಮಾತನಾಡಿ, ಬೇಲೂರಿನ ಸೆಸ್ಕ್ ವಿಭಾಗದಿಂದ ತಾಲೂಕಿನ ವಿವಿಧ ಸೆಕ್ಷನ್‌ನ 5 ತಂಡಗಳು ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆದಿರುವುದು ಶ್ಲಾಘನೀಯ. ಕ್ರೀಡೆಯಲ್ಲಿ ಗೆಲುವು, ಸೋಲು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಆದ್ದರಿಂದ ಪ್ರತಿಯೊಬ್ಬರೂ ಒಂದಲ್ಲಾ ಒಂದು ಕ್ರೀಡೆಗಳಲ್ಲಿ ಭಾಗವಹಿಸಿ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಲು ಮುಂದಾದಾಗ ಮಾತ್ರ ತಮ್ಮ ವೃತ್ತಿಯಲ್ಲೂ ಉತ್ತಮ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.