ಬೇಲೂರು: ದೇವರ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಸಂಬಂಧ ಎರಡು ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಸೋಮವಾರ ಬೆಳಗ್ಗೆ ತಾಲೂಕಿನ ಇ.ಹೊಸಳ್ಳಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಒಂದು ಸಮುದಾಯ ಪ್ರತಿಭಟನೆ ನಡೆಸಿದರೆ, ತಾಲೂಕು ಆಡಳಿತದ ಮಧ್ಯಸ್ಥಿಕೆಯಲ್ಲಿ ಮತ್ತೊಂದು ಸಮುದಾಯದವರು ಕೊಂಡೋತ್ಸವ ನೆರವೇರಿದರು.ದಲಿತರು ದೇವಸ್ಥಾನಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿದರು.